

ಚೆನ್ನೈ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ತಮಿಳು ಮಾಧ್ಯಮದಲ್ಲಿ 6-12ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯರಿಗಾಗಿ ಮಾಸಿಕ ಒಂದು ಸಾವಿರ ರೂ. ನೀಡುವ ಯೋಜನೆಗೆ ಸೋಮವಾರ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಚಾಲನೆ ನೀಡಿದ್ದಾರೆ.
‘ಪುದುಮೈ ಪೆಣ್’ ಯೋಜನೆ ಇದಾಗಿದ್ದು, ಶಾಲೆಗಳಲ್ಲಿ ಹೆಣ್ಣುಮಕ್ಕಳ ದಾಖಲಾತಿಯನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ. ಸಮಾಜ ಕಲ್ಯಾಣ ಇಲಾಖೆ ಮೂಲಕ ಮೂವಲೂರು ರಾಮಾಮೃತಂ ಸ್ಮಾರಕ ಉನ್ನತ ಶಿಕ್ಷಣ ಗ್ಯಾರಂಟಿ ಯೋಜನೆಯ ಭಾಗವಾಗಿ ಪುದುಮೈ ಪೆಣ್ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದರನ್ವಯ ಉನ್ನತ ಶಿಕ್ಷಣದಲ್ಲಿ ಸರ್ಕಾರಿ ಶಾಲಾ- ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಹೆಣ್ಣುಮಕ್ಕಳ ಪ್ರವೇಶಕ್ಕೆ ಆರ್ಥಿಕ ನೆರವು ನೀಡುವ ಮೂಲಕ ಉತ್ತೇಜನ ನೀಡಲಾಗುತ್ತಿದೆ.