10,260 ಬಾಕ್ಸ್ ಲಿಕ್ಕರ್, 8400 ಬಾಕ್ಸ್ ಬಿಯರ್ ಮಾರಾಟ

DRINKS
Published on

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ ಹರಿದು ಬಂದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಮದ್ಯ ಮಾರಾಟವಾಗಿದೆ.

ಮೈಸೂರು ನಗರದಲ್ಲಿ ಮಂಗಳವಾರ ಬೆಳಗ್ಗೆಯಿಂದ ಸಂಜೆವರೆಗೆ ಐಎಂಎಲ್‌ನಿಂದ 10,260 ಬಾಕ್ಸ್ ಲಿಕ್ಕರ್ ಹಾಗೂ 8400 ಬಾಕ್ಸ್ ಬಿಯರ್ ಮಾರಾಟವಾಗಿದೆ.

ಹಾಗೆಯೇ ಗ್ರಾಮಾಂತರ ವಿಭಾಗದ ಪಿರಿಯಾಪಟ್ಟಣ, ಹುಣಸೂರು, ಎಚ್.ಡಿ.ಕೋಟೆ, ಕೆ.ಆರ್.ನಗರ, ನಂಜನಗೂಡು ಹಾಗೂ ತಿ.ನರಸೀಪುರ ತಾಲೂಕಿನಲ್ಲೂ ಕೋಟ್ಯಂತರ ರೂಪಾಯಿ ಮೌಲ್ಯದ ಮದ್ಯ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಅಬಕಾರಿ ಇಲಾಖೆಗೆ ನಿರೀಕ್ಷೆಗೂ ಮೀರಿದ ಆದಾಯ ಹರಿದುಬಂದಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net