4 ಲಕ್ಷ ಸಮೀಪಿಸುತ್ತಿದೆ ರಾಜ್ಯದ ಕರೊನಾ ಸೋಂಕಿತರ ಸಂಖ್ಯೆ; ಇಂದು 104 ಜನ ಸಾವು

covid-19
Published on

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8865 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,70,206ಕ್ಕೆ ಏರಿಕೆಯಾಗಿದೆ. ಹಾಗೇ ಒಂದೇ ದಿನದಲ್ಲಿ 7122 ಮಂದಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿ, 104 ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲೀಗ ಕರೊನಾ ಸಕ್ರಿಯ ಪ್ರಕರಣಗಳು 96,098, ಆಸ್ಪತ್ರೆಯಿಂದ ಬಿಡುಗಡೆಯಾದವರು 2,68,035 ಹಾಗೂ ಮೃತರ ಒಟ್ಟು ಸಂಖ್ಯೆ 6054 ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net