

ಬೆಂಗಳೂರು: ರಾಜ್ಯದಲ್ಲಿ ಗುರುವಾರ 24 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದ್ದು, ಸೋಂಕು ಪ್ರಮಾಣ ದರ ಶೇ. 1.06 ತಲುಪಿದೆ.
ಬೆಂಗಳೂರಿನಲ್ಲಿ 1,540 ಸೇರಿ ರಾಜ್ಯಾದ್ಯಂತ 2,263 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನಲ್ಲಿ 23 ಹಾಗೂ ದಕ್ಷಿಣ ಕನ್ನಡದಲ್ಲಿ ಒಬ್ಬರು ಸೇರಿ 24 ಮಂದಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ 85 ಮಂದಿ ಮನೆ ಆರೈಕೆಗೆ ಒಳಗಾದರೆ, 20 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 9 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. 11 ಮಂದಿ ಚೇತರಿಸಿಕೊಂಡಿದ್ದಾರೆ.