10, 12ರ ಪಾಸ್ ಅಂಕ ಶೇ.33: ಸಚಿವ ಮಧು ಬಂಗಾರಪ್ಪಹೇಳಿದ್ದಿಷ್ಟು

Madhu Bangarappa PC
Published on

ಬೆಂಗಳೂರು: ಸಿಬಿಎಸ್‌ಇ ಮತ್ತು ಇತರೆ ರಾಜ್ಯಗಳ ಮಂಡಳಿ ಪರೀಕ್ಷೆಗಳಲ್ಲಿರುವಂತೆ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಕನಿಷ್ಠ ತೇರ್ಗಡೆ ಅಂಕಗಳನ್ಜು ಶೇ.35ರಿಂದ 33ಕ್ಕೆ ನಿಗದಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ೋಷಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನಿಯಮವು ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು (್ರೆಷರ್ಸ್), ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೂ ಅನ್ವಯವಾಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಈಗಾಗಲೇ ಮೂರು ಪರೀಕ್ಷಾ ನಿಯಮಗಳು ಮತ್ತು ವೆಬ್‌ಕಾಸ್ಟಿಂಗ್ ಪರೀಕ್ಷೆಗಳಿಂದ ಸಾಕಷ್ಟು ಸುಧಾರಣೆ ತರಲಾಗಿದೆ. ಅದರಂತೆಯೇ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 4ನೇ ವರದಿಯಲ್ಲಿಯೂ ಸಹ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಉತ್ತೀರ್ಣತಾ ಅಂಕಗಳನ್ನು ಕಡಿಮೆ ಮಾಡಲು ಶಿಾರಸು ಮಾಡಿತ್ತು. ಅದರಂತೆ ಹೊಸ ನಿಯಮಗಳು ಮುಂಬರುವ ಮಾರ್ಚ್/ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನ್ವಯವಾಗಲಿವೆ ಎಂಬ ಮಾಹಿತಿಯನ್ನು ನೀಡಿದರು.

625ಕ್ಕೆ 206 ಅಂಕ ಪಡೆದರೆ ಪಾಸ್

ಎಸ್‌ಎಸ್‌ಎಲ್‌ಸಿಯಲ್ಲಿ ಅಭ್ಯರ್ಥಿಗಳು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟು ಶೇ.33 ಅಂಕಗಳನ್ನು ಪಡೆಯಬೇಕು. 625 ಅಂಕಗಳಿಗೆ ಕನಿಷ್ಠ 206 ಅಂಕ ಪಡೆದು ಮತ್ತು ವಿಷಯವಾರು ಕನಿಷ್ಠ 30 ಅಂಕಗಳನ್ನು ಪಡೆದಲ್ಲಿ ಅಂತಹ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ.

ದ್ವಿತೀಯ ಪಿಯುಸಿಯಲ್ಲಿ ಪ್ರತಿ ವಿಷಯದಲ್ಲಿ ಲಿಖಿತ ಮತ್ತು ಪ್ರಾಯೋಗಿಕ/ಆಂತರಿಕ ಅಂಕಗಳು ಸೇರಿ ಶೇ.30 ಅಂಕಗಳನ್ನು ಪಡೆದು ಒಟ್ಟು 600ಕ್ಕೆ 198 (ಶೇ.33) ಅಂಕಗಳು ಪಡೆದಲ್ಲಿ ಅಂತಹ ಅಭ್ಯರ್ಥಿಯು ಉತ್ತೀರ್ಣರೆಂದು ೋಷಿಸಲಾಗುತ್ತದೆ.

ಎಂದಿನಂತೆ ಮೂರು ಪರೀಕ್ಷೆ

ಕನಿಷ್ಠ ಅಂಕಗಳ ನಿಯಮಗಳನ್ನು ತಿದ್ದುಪಡಿ ಮಾಡಿರುವುದರಿಂದ ಮೂರು ಪರೀಕ್ಷೆಗಳ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಎಂದಿನಂತೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಲಿತಾಂಶ ಉತ್ತಮಪಡಿಸಿಕೊಳ್ಳಲು ಹಾಗೂ ಸಿಇಟಿಯಲ್ಲಿ ರ‌್ಯಾಂಕ್ ಉತ್ತಮಪಡಿಸಿಕೊಳ್ಳಲು ಉಪಯೋಗವಾಗಲಿದೆ.

ಎಲ್ಲ ಆಕ್ಷೇಪಣೆಗಳು ಶೇ.33 ಪರ:

ಪ್ರಸ್ತುತ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ತೇರ್ಗಡೆಯಾಗಲು ಕನಿಷ್ಠ ಶೇ.35 ಅಂಕಗಳನ್ನು ಪಡೆಯಬೇಕೆಂಬ ನಿಯಮವಿದೆ. ವಿದ್ಯಾರ್ಥಿಗಳ ಉತ್ತೀರ್ಣತಾ ಪ್ರಮಾಣವನ್ನು ಹೆಚ್ಚಿಸುವ ದೃಷ್ಟಿಯಿಂದ ಮತ್ತು ಸಿಬಿಎಸ್‌ಸಿ ಹಾಗೂ ನೆರೆ ರಾಜ್ಯಗಳ ಉತ್ತೀರ್ಣತಾ ಮಾನದಂಡವನ್ನು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೂ ಸಹ ಅನ್ವಯವಾಗಲಿದೆ ಎಂದರು.

ಏಕರೂಪ ಪದ್ಧತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಮಂಡಳಿ ನಿಯಮಗಳಲ್ಲಿ ತಿದ್ದುಪಡಿ ತರಲು ಕರಡು ನಿಯಮದ ಅಧಿಸೂಚನೆಯಲ್ಲಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು. ಇದರಲ್ಲಿ 701 ಆಕ್ಷೇಪಣೆಗಳು ಶೇ.33ರ ಪರವಾಗಿ ಮತ್ತು ಕೇವಲ 8 ಆಕ್ಷೇಪಣೆಗಳು ವಿರೋಧ ವ್ಯಕ್ತಪಡಿಸಿವೆ ಎಂದು ಸಚಿವರು ಮಾಹಿತಿ ನೀಡಿದರು.

ಹೊಸ ನಿಯಮದ ವ್ಯತ್ಯಾಸ/ಪರಿಣಾಮವೇನು?

- ಇಲ್ಲಿಯವರೆಗೂ ಶೇ.35 ಅಂಕ ಪಡೆದ ಅಭ್ಯರ್ಥಿಗಳು ಉತ್ತೀರ್ಣರಾಗುತ್ತಾರೆಂಬ ನಿಯಮವಿದೆ. ಇದರಲ್ಲಿ ಆಂತರಿಕ ಅಂಕಗಳು ಎಷ್ಡೇ ಪಡೆದಿದ್ದರೂ ಲಿಖಿತ ಪರೀಕ್ಷೆಯಲ್ಲಿ 80 ಅಂಕಗಳಿಗೆ ಕನಿಷ್ಠ 28 ಅಂಕಗಳನ್ನು ಪಡೆಯಬೇಕಿತ್ತು. - ಹೊಸ ನಿಯಮಗಳ ಪ್ರಕಾರ ಆಂತರಿಕ ಮತ್ತು ಲಿಖಿತ ಪರೀಕ್ಷೆ ಎರಡೂ ಸೇರಿ ಶೇ.33 ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ಉದಾ- ಒಟ್ಟು 100 ಅಂಕಗಳ ಪರೀಕ್ಷೆಯಲ್ಲಿ 80 ಲಿಖಿತ ಮತ್ತು 20 ಅಂತರಿಕ ಅಂಕಗಳನ್ನು ನಿಗದಿ ಮಾಡಲಾಗಿದೆ. ಇದರಲ್ಲಿ ಆಂತರಿಕ ಅಂಕಗಳಲ್ಲಿ 20ಕ್ಕೆ 18 ಪಡೆದು ಲಿಖಿತ ಪರೀಕ್ಷೆಯಲ್ಲಿ 80ಕ್ಕೆ 15 ಅಂಕಗಳನ್ನು ಪಡೆದ ವಿದ್ಯಾರ್ಥಿಯು ಉತ್ತೀರ್ಣನಾಗುತ್ತಾನೆ. - ಇದರಿಂದ ಕನಿಷ್ಠ ಅಂಕಗಳನ್ನು ಪಡೆಯಲು ಸಾಧ್ಯವಾಗದೆ ಅನುತ್ತೀರ್ಣರಾಗುತ್ತಿದ್ದ ವಿದ್ಯಾರ್ಥಿಗಳು ತೇರ್ಗಡೆ ಹೊಂದಬಹುದಾಗಿದೆ. ಉನ್ನತ ಶಿಕ್ಷಣ ಪಡೆಯಲು ಮತ್ತು ಓದಿನಲ್ಲಿ ಹಿಂದುಳಿದಿದ್ದು ಐಟಿಐಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣ ಪಡೆಯಲು ಇಚ್ಛಿಸುವವರಿಗೆ ಹೆಚ್ಚು ಸಹಕಾರಿ

ಹೊಸ ನಿಯಮಗಳಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸುವ ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ. - ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net