10ರಿಂದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ

Kumbhamela Story-1
Published on

ಜಿಲ್ಲಾಡಳಿತ ಹಾಗೂ ಕುಂಭಮೇಳ ಆಚರಣಾ ಸಮಿತಿ ವತಿಯಿಂದ ಜಿಲ್ಲೆಯ ತಿರುಮಕೂಡಲು ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ.10 ರಿಂದ 12ರವರೆಗೆ 13ನೇ ಕುಂಭಮೇಳ ನಡೆಯಲಿದೆ.

ಫೆ.10ರಂದು ಬೆಳಗ್ಗೆ 8.30 ಗಂಟೆಗೆ ಶ್ರೀ ಅಗಸ್ತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಅಂಕುರಾರ್ಪಣೆ ಮತ್ತು ಧ್ವಜಾರೋಹಣ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

ಸಚಿವರಾದ ಕೆ.ವೆಂಕಟೇಶ್, ರಾಮಲಿಂಗಾರೆಡ್ಡಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸುನಿಲ್ಬೋಸ್ ಸೇರಿದಂತೆ ಶಾಸಕರು ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.

ಫೆ.11ರಂದು ಬೆಳಗ್ಗೆ 11 ಗಂಟೆಗೆ ಧಾರ್ಮಿಕ ಸಭೆ, ಫೆ.12ರಂದು ಮ.12 ಗಂಟೆಗೆ ಧರ್ಮಸಭೆಯನ್ನು ಏರ್ಪಡಿಸಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net