

ಮುಜಾಫರ್ಪುರ: ಎಸ್ಯುವಿ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಸಾವಿಗೀಡಾಗಿ, 4 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಮುಜಾಫರ್ಪುರದ ಕಂಟಿ ಪೊಲೀಸ್ ಠಾಣಾ ಏರಿಯಾದ ರಾಷ್ಟ್ರೀಯ ಹೆದ್ದಾರಿ 28ರಲ್ಲಿ ಇಂದು ಬೆಳ್ಳಂಬೆಳಗ್ಗೆ ದುಘಟನೆ ನಡೆದಿದೆ. ಮೃತಪಟ್ಟವರು ಗುರುತು ತಿಳಿದುಬರಬೇಕಿದೆ.
ಸದ್ಯ ಗಂಭೀರವಾಗಿ ಗಾಯಾಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. (ಏಜೆನ್ಸೀಸ್)