

ಇಂದೋರ್: 11 ವರ್ಷದ ಬಾಲಕನನ್ನು ಹಿಗ್ಗಾಮುಗ್ಗಾ ಥಳಿಸಿ ಧಾರ್ಮಿಕ ಗೋಷಣೆಗಳನ್ನು ಕೂಗುವಂತೆ ಒತ್ತಾಯ ಮಾಡಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ.
ಬಾಲಕನನ್ನು ವಿವಸ್ತ್ರಗೊಳಿಸಿ ಧಾರ್ಮಿಕ ಘೋಷಣೆಗಳನ್ನು ಕೂಗುವಂತೆ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ಆರೋಪಿಗಳು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಘಟನೆಯೂ ಇಂದೋರ್ನ ಲಸುಡಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಿಪಾಣಿಯ ಪ್ರದೇಶದಲ್ಲಿ ನಡೆದಿದ್ದು ಸ್ಟಾರ್ ಸ್ಕ್ವೇರ್ ಬಳಿ ಸ್ನೇಹಿತರೊಂದಿಗೆ ಆಟವಾಗುತ್ತಿದ್ದ ಬಾಲಕನನ್ನು ಆರೋಪಿಗಳ ಬೈಪಾಸ್ ರಸ್ತೆ ಬಳಿ ಕಡಿಮೆ ದರಕ್ಕೆ ಆಟಿಕೆಗಳನ್ನು ಮಾರಾಟ ಮಾಡುತ್ತಿರುವುದಾಗಿ ಹೇಳಿದ್ದಾರೆ.
ನಂತರ ಬಾಲಕನನ್ನು ಆರೋಪಿಗಳು ಮಹಾಲಕ್ಷ್ಮೀ ನಗರದ ಬಳಿ ಕರೆದುಕೊಂಡು ಹೋಗಿ ವಿವಸ್ತ್ರಗೊಳಿಸಿ ಧಾರ್ಮಿಕ ಘೋಷಣೆಗಳನ್ನು ಕೂಗುವಂತೆ ಬಲವಂತ ಮಾಡಿದ್ದಾರೆ. ನಂತರ ಬಾಲಕ ಉಪಾಯದಿಂಧ ತಪ್ಪಿಸಿಕೊಂಡು ಮನೆಗೆ ಬಂದು ನಡೆದ ಘಟನೆ ಬಗ್ಗೆ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ಧಾನೆ.
ಸಂತ್ರಸ್ತ ಬಾಲಕ ನೀಡಿದ ಹೇಳಿಕೆಯನ್ನು ಆಧರಿಸಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ರಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ದ ಅಪಹರಣ, ಬೆದರಿಕೆ ಹಾಗೂ ಹಲ್ಲೆ ಪ್ರಕರಣಗಳ ಅಡಿ ಪ್ರಕರೌನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬಾಲಕನ ಮೇಲೆ ಹಲ್ಲೆಯ ಘಟನೆ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದು ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹ ಕೇಳಿ ಬಂದಿದೆ. ಇದೇ ವೇಳೆ ಪೊಲೀಸರು ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಯಾರು ಹಂಚಿಕೊಳ್ಳಬಾರದು ಎಂದು ವಿನಂತಿಸಿದ್ಧಾರೆ.