12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿತ!

Untitled design - 2024-06-18T185054.241
Published on

ಬಿಹಾರ: ಅರಾರಿಯಾದಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ನೋಡ ನೋಡುತ್ತಿದ್ದಂತೆ ಕುಸಿದಿದ್ದು, ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಕೋಟಿಗಟ್ಟಲೆ ಖರ್ಚು ಮಾಡಿ ಬಕ್ರಾ ನದಿಗೆ ನಿರ್ಮಿಸಲಾದ ಕಾಂಕ್ರೀಟ್ ಸೇತುವೆ ಕ್ಷಣಮಾತ್ರಗಳಲ್ಲಿ ನೆಲಸಮಗೊಂಡಿದೆ.

ವೇಗವಾಗಿ ಹರಿಯುವ ಬಕ್ರಾ ನದಿಯ ಸೇತುವೆ ಒಂದು ಬದಿಗೆ ವಾಲಿರುವುದು ದೃಶ್ಯದಲ್ಲಿ ಕಾಣಬಹುದು. ಸೇತುವೆ ಕುಸಿಯುತ್ತಿರುವ ವೇಳೆ ನದಿಯ ದಡದಲ್ಲಿ ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಘಟನೆಯನ್ನು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಕುಸಿತದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಮತ್ತು ಗಾಯಗಳು ವರದಿಯಾಗಿಲ್ಲ. ಬಿಹಾರದ ಅರಾರಿಯಾ ಜಿಲ್ಲೆಯ ಕುರ್ಸಕಾಂತ ಮತ್ತು ಸಿಕ್ತಿ ನಡುವಿನ ಪ್ರಯಾಣದ ಅನುಕೂಲಕ್ಕಾಗಿ ಈ ಸೇತುವೆಯನ್ನು ನಿರ್ಮಿಸಲಾಗಿತ್ತು.

12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಸೇತುವೆ ಇದೀಗ ಉದ್ಘಾಟನೆಗೂ ಮುನ್ನವೇ ಕುಸಿದಿದೆ. "ನಿರ್ಮಾಣ ಕಂಪನಿಯ ಮಾಲೀಕರ ನಿರ್ಲಕ್ಷ್ಯದಿಂದ ಸೇತುವೆ ಕುಸಿತ ಕಂಡಿದೆ. ಈ ಬಗ್ಗೆ ಆಡಳಿತವು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ" ಎಂದು ಸಿಕ್ತಿ ಶಾಸಕ ವಿಜಯ್ ಕುಮಾರ್ ಹೇಳಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net