ಚಿಂತಾಮಣಿಯ ಬಿಜೆಪಿ ಅಭ್ಯರ್ಥಿ ಪರ ಮತದಾರರಿಗೆ ಹಂಚುತಿದ್ದ 12 ಲಕ್ಷ ರೂ. ಜಪ್ತಿ

ckb money
Published on

ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ ಒಂದು ದಿನ ಮಾತ್ರ ಬಾಕಿ ಇದೆ. ಈ ಮಧ್ಯೆ ಅಕ್ರಮ ಹಣ, ಮದ್ಯ ಹಂಚಿಕೆ ಕುರಿತಾಗಿ ಅಧಿಕಾರಿಗಳು ಹಲವು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಚುನಾವಣಾ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿ ಅಪಾರ ಪ್ರಮಾಣದ ಹಣವನ್ನು ಜಪ್ತಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಜಿ.ಎನ್. ವೇಣುಗೋಪಾಲ್ ಪರ ಹಂಚಿಕೆ ಆಗುತಿದ್ದ ಹಣ ಎಂದು ಹೇಳಲಾಗಿದೆ. ಒಟ್ಟು 12 ಲಕ್ಷ 88 ಸಾವಿರ ರೂಪಾಯಿಯನ್ನು ಎಲೆಕ್ಷನ್ ಸೆಕ್ಟರ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಚಿಂತಾಮಣಿ ತಾಲೂಕಿನ ಉಲಪನಹಳ್ಳಿ ಗ್ರಾಮದಲ್ಲಿ ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net