

ಬೆಂಗಳೂರು: ಬೆಂಗಳೂರು ಬಂದ್ ವೇಳೆ ಚಾಲಕರ ಮೇಲೆ ಮತ್ತು ರ‌್ಯಾಪಿಡೋ ಸವಾರರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಪ್ರಕರಣ ದಾಖಲಿಸಿಕೊಂಡು 12 ಮಂದಿಯನ್ನು ಬಂಧಿಸಲಾಗಿದೆ.
ಕೇಂದ್ರ ಮತ್ತು ಆಗ್ನೇಯ ವಿಭಾಗದಿಂದ ತಲಾ ಒಂದು ಪ್ರಕರಣಗಳು ದಾಖಲಾಗಿದ್ದು ೩ ಆರೋಪಿಗಳನ್ನು ಬಂಧಿಸಲಾಗಿದೆ. ಉತ್ತರ ವಿಭಾಗದಲ್ಲಿ ೨ ಪ್ರಕರಣಗಳು ದಾಖಲಾಗಿದ್ದು, ೬ ಆರೋಪಿಗಳನ್ನು ಬಂಧಿಸಲಾಗಿದೆ. ಈಶಾನ್ಯ ವಿಭಾಗದಲ್ಲಿ ೨ ಪ್ರಕರಣಗಳು ದಾಖಲಾಗಿದ್ದು, ೩ ಆರೋಪಿಗಳನ್ನು ಬಂಧಿಸಲಾಗಿದೆ. ಪಶ್ಚಿಮ ವಿಭಾಗದಲ್ಲಿ ೭ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಬೇಕಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.