ಹಪ್ಪಳಕ್ಕಾಗಿ ಮದುವೆ ಮಂಟಪದಲ್ಲಿ ನಡೆಯಿತು ಭಾರಿ ಗಲಾಟೆ: ನಷ್ಟವಾಗಿದ್ದು ಬರೋಬ್ಬರಿ 1.5 ಲಕ್ಷ ರೂಪಾಯಿ

Appala
Published on

ಕೊಚ್ಚಿ: ಮದುವೆ ಸಮಾರಂಭದ ವೇಳೆ ಹೆಚ್ಚುವರಿ ಹಪ್ಪಳಕ್ಕಾಗಿ ನಡೆದ ಗಲಾಟೆಯಲ್ಲಿ ಟೇಬಲ್ಸ್​ ಮತ್ತು 25 ಕುರ್ಚಿಗಳಿಗೆ ಹಾನಿಯಾಗಿದ್ದು ಸೇರಿದಂತೆ ಕಲ್ಯಾಣ ಮಂಟಪಕ್ಕೆ ಸುಮಾರು 1.5 ಲಕ್ಷ ರೂಪಾಯಿ ನಷ್ಟವಾಗಿರುವ ಘಟನೆ ಕೇರಳದ ಹರಿಪಾದದಲ್ಲಿ ನಡೆದಿದೆ.

ಈ ಘಟನೆ ಭಾನುವಾರ (ಆ.28) ಮುತ್ತೊಮ್​ನಲ್ಲಿ ನಡೆದಿದೆ. ಮದುವೆ ವೇಳೆ ವರನ ಕಡೆಯವರು ಎರಡನೇ ಬಾರಿಗೆ ಹಪ್ಪಳವನ್ನು ಕೇಳಿದರು. ಇದು ಎರಡು ಗುಂಪಿನ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ವಾಗ್ವಾದ ಹೊಡೆದಾಟಕ್ಕೂ ತಿರುಗಿ, ಕಲ್ಯಾಣ ಮಂಟಪದಲ್ಲೇ ಎರಡು ಗುಂಪಿನವರು ಬಡಿದಾಡಿಕೊಂಡರು.

ಇದೇ ಸಂದರ್ಭದಲ್ಲಿ ಕಲ್ಯಾಣ ಮಂಟಪದ ಮಾಲೀಕರು ಎರಡು ಗುಂಪಿನ ನಡುವೆ ಮಾತನಾಡಿದ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಲಾಟೆಯಲ್ಲಿ ಮಾಲೀಕರು ಸೇರಿದಂತ ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net