ಶ್ರೀನಗರದಲ್ಲಿ ಸಿಲುಕಿದ್ದ 13 ಕೃಷಿ ವಿದ್ಯಾರ್ಥಿಗಳು ಬೆಂಗಳೂರಿಗೆ ವಾಪಸ್|Stranded

N
Published on

ಬೆಂಗಳೂರು: ಶ್ರೀನಗರದ ಶೇರ್-ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್(13 agriculture students stranded in Srinagar return to Bengaluru) ಬಂದಿದ್ದಾರೆ. ಸುರಕ್ಷಿತವಾಗಿ ಬಂದ ವಿದ್ಯಾರ್ಥಿಗಳು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಅವರನ್ನ ಭೇಟಿ ಮಾಡಿ ಸಂತಸ ವ್ಯಕ್ತಪಡಿಸಿದರು.

ನಿಖಿಲ್ ಕುಮಾರಸ್ವಾಮಿ ಅವರು ವಿದ್ಯಾರ್ಥಿಗಳ ಸುರಕ್ಷತೆಯನ್ನು ಅವರು ತುಂಬ ಗಂಭೀರವಾಗಿ ಪರಿಗಣಿಸಿದ್ದು ನಮಗೆ ತುಂಬಾ ಸಂತೋಷ ಉಂಟು ಮಾಡಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವೈಯಕ್ತಿಕ ಕಾಳಜಿ, ನೆರವು ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ದೊರೆತ ಸಹಾಯದಿಂದ ನಾವು ಸುರಕ್ಷಿತವಾಗಿ ನಮ್ಮ ನಮ್ಮ ಮನೆಗಳಿಗೆ ತಲುಪುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆ ಗ್ರಾಮದ ವಿದ್ಯಾರ್ಥಿ ಹರ್ಷಿತ್ ಅವರ ಪೋಷಕರು ಜಮ್ಮುವಿನಲ್ಲಿ ಸಿಲುಕಿರುವ ತಮ್ಮ ಪುತ್ರನನ್ನು ರಕ್ಷಣೆ ಮಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಕೂಡಲೇ ಈ ವಿಷಯವನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಗಮನಕ್ಕೆ ತಂದು ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರಕ್ಕೆ ಮನವಿ ಮಾಡಿದ್ದರು, ಈಗ ಮನೆಗೆ ತಲುಪಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net