ನಕಲಿ ಮದ್ಯ ಸೇವಿಸಿ 13 ಮಂದಿ ಮೃತ್ಯು; 9 ಜನ ಅರೆಸ್ಟ್​​, ನಾಲ್ವರು ಪೊಲೀಸರ ಅಮಾನತು

tamilnadu
Published on

ತಮಿಳುನಾಡು: ನಕಲಿ ಮದ್ಯ ಸೇವಿಸಿ ಎರಡು ಪ್ರತ್ಯೇಕ ಘಟನೆಗಳಲ್ಲಿ 13 ಮಂದಿ ಸಾವನ್ನಪ್ಪಿದ್ದು, ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಲ್ಲುಪುರಂ ಜಿಲ್ಲೆಯ ಮರಕ್ಕನಂನಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದರೆ, ಚೆಂಗಲ್ಪಟ್ಟು ಜಿಲ್ಲೆಯ ಮಧುರಾಂತಕಂನಲ್ಲಿ ನಾಲ್ವರು ನಾಲ್ವರು ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ.

ಕರ್ತವ್ಯ ಲೋಪವೆಸಗಿದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪೊಲೀಸರು 57 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ನಕಲಿ ಮದ್ಯ ಮತ್ತು ಗುಟ್ಕಾ ತಯಾರಿಸಿ ಸರಬರಾಜು ಮಾಡಿದ ಒಂಬತ್ತು ಜನರನ್ನು ಬಂಧಿಸಿದ್ದಾರೆ.

"ಎಟನಾಲ್-ಮೆಥೆನಾಲ್ ಪದಾರ್ಥವನ್ನು ಬೆರೆಸಿದ ನಕಲಿ ಮದ್ಯವನ್ನು ಸೇವಿಸಿರಬಹುದು. ಈ ಹಿಂದೆ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಐವರು ಆಸ್ಪತ್ರೆಗೆ ದಾಖಲಾಗಿದ್ದರು. ನಾಲ್ವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದರು. ಶವ ಪರೀಕ್ಷೆ ನಡೆಸಲಾಗಿದೆ " ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

"ಚೆಂಗಲ್ಪಟ್ಟು ಘಟನೆಗೆ ಸಂಬಂಧಿಸಿದಂತೆ ಆರೋಪಿ ಅಮ್ಮಾವಸಾಯಿಯನ್ನು ಬಂಧಿಸಲಾಗಿದೆ. ಎರಡೂ ಘಟನೆಗಳಲ್ಲಿ ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಮತ್ತು ವಿಶೇಷ ತಂಡಗಳು ಆರೋಪಿಗಳನ್ನು ಬಂಧಿಸಲು ರಚಿಸಲಾಗಿದೆ. ಕರ್ತವ್ಯ ಲೋಪಕ್ಕಾಗಿ ಎರಡೂ ಜಿಲ್ಲೆಗಳಿಂದ ಮೂವರು ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಸಬ್‌ಇನ್‌ಸ್ಪೆಕ್ಟರ್‌ಗಳನ್ನು ಅಮಾನತುಗೊಳಿಸಲಾಗಿದೆ," ಎಂದು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿಕೆಯಲ್ಲಿ, "ರಾಜ್ಯದಲ್ಲಿ ಮದ್ಯ ಸೇವನೆಯಿಂದ ಸಾವುಗಳು ಸಂಭವಿಸುತ್ತಿರುವುದು ನನಗೆ ಬೇಸರ ತಂದಿದೆ. ಮೃತರ ಕುಟುಂಬಕ್ಕೆ ರೂ 10 ಲಕ್ಷ ಪರಿಹಾರ ಮತ್ತು ಘಟನೆಯಲ್ಲಿ ಆಸ್ಪತ್ರೆಗೆ ದಾಖಲಾದ ಜನರಿಗೆ ರೂ 50,000 ಪರಿಹಾರಕ್ಕೆ ಆದೇಶಿಸಲಾಗಿದೆ.  ಮರಕ್ಕನಂ ಇನ್ಸ್‌ಪೆಕ್ಟರ್ ಅರುಲ್ ವಡಿವಳಗನ್, ಸಬ್ ಇನ್‌ಸ್ಪೆಕ್ಟರ್ ದೀಬನ್, ಕೊಟ್ಟಕುಪ್ಪಂ ನಿಷೇಧಾಜ್ಞೆ ಜಾರಿ ವಿಭಾಗದ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮರಿಯಾ ಸೋಫಿ ಮಂಜುಳಾ ಮತ್ತು ಸಬ್ ಇನ್‌ಸ್ಪೆಕ್ಟರ್ ಶಿವಗುರುನಾಥನ್ ಅವರನ್ನು ಅಮಾನತುಗೊಳಿಸಲಾಗಿದೆ" ಎಂದು ಸಿಎಂ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net