

Death : ಶಾಲಾ ಆವರಣದಲ್ಲಿ ವಿದ್ಯುತ್ ಸ್ಪರ್ಶಿಸಿ 13 ವಷರ್ದ ಬಾಲಕ ಸಾವನ್ನಪ್ಪಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
ಮಿಥುನ್(13) ಮೃತ ದುರ್ದೈವಿ. ಇಲ್ಲಿನ ತೇವಲಕ್ಕರ ಗ್ರಾಮದ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು. ಬೆಳಿಗ್ಗೆ 9:15ರ ಸುಮಾರಿಗೆ ಮಿಥುನ್ ಶೆಡ್ನಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಹೊರತೆಗೆಯಲು ಪ್ರಯತ್ನಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಜೂಜಾಟ ಆಡಿಸುತ್ತಿದ್ದ ಯುವಕರು ಅಂದರ್
ಈ ಪ್ರಕರಣಕ್ಕೆ ಸಂಭಂದಿಸಿದಂತೆ ಶಿಕ್ಷಣ ಮಂತ್ರಿ ವಿ.ಶಿವನ್ಕುಟ್ಟಿ ಪ್ರತಿಕ್ರಿಯಿಸಿ, ''ಈ ಸಾವು ಅತ್ಯಂತ ದುರಂತವಾಗಿದೆ. ಈ ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚಿಸಿದ್ದಾರೆ. (ಏಜೆನ್ಸೀಸ್)