

Girl Beaten: ಉತ್ತರಪ್ರದೇಶದ ಕಿಥೌರ್ ಪ್ರದೇಶದಲ್ಲಿ 14 ವರ್ಷದ ಬಾಲಕಿಯ ವಿಡಿಯೋವನ್ನು ಚಿತ್ರೀಕರಿಸಿದ ವ್ಯಕ್ತಿಯೊಬ್ಬನನ್ನು ಖುದ್ದಾಗಿ ಆಕೆಯೇ ಪ್ರಶ್ನೆ ಮಾಡಿದಕ್ಕೆ ಅವಳ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲು ಯತ್ನಿಸಿರುವ ಘಟನೆ ಅಲ್ಲಿನ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸುದ್ಧಿಮೂಲಗಳ ಪ್ರಕಾರ, ಬಾಲಕಿಯು ಗಾಜಿಯಾಬಾದ್ ಲೋನಿ ಪ್ರದೇಶದಿಂದ ಅಜ್ಜಿಯ ಮನೆಗೆ ಭೇಟಿ ನೀಡಿದ್ದಳು. ಆಗ ಅಪರಿಚಿತ ವ್ಯಕ್ತಿಯೊಬ್ಬ ರಹಸ್ಯವಾಗಿ ಆಕೆಯ ವಿಡಿಯೋ ಮಾಡಿದ್ದಾನೆಂದು ತಿಳಿದು ಅವನನ್ನು ಪ್ರಶ್ನೆ ಮಾಡಿದ್ದಾಳೆ. ಈ ವೇಳೆ ಅವರಿಬ್ಬರ ನಡುವೆ ಸಂಘರ್ಷ ಪ್ರಾರಂಭಿಸಿದೆ. ಈ ವೇಳೆ ಆತ ಬಾಲಕಿಯ ಮೇಲೆ ಹಲ್ಲೆ ನಡೆಸಿ ಕುತ್ತಿಗೆ ಹಿಸುಗಿದ್ದಾನೆ ಎಂದು ವರದಿಯಾಗಿದೆ.
ಈ ವೇಳೆ ಆಕೆಯ ಕಿರುಚಾಟವನ್ನು ಗಮನಿಸಿದ ಸ್ಥಳೀಯರು, ಸಹಾಯಕ್ಕೆ ಧಾವಿಸಿ ರಕ್ಷಣೆ ಮಾಡಿ, ಆಕೆಯ ಕುಟುಂಬಕ್ಕೆ ಮಾಹಿತಿ ತಿಳಿಸಿದ್ದಾರೆ. ಇದಾದ ಬಳಿಕ ಬಾಲಕಿಯು ಪೊಲೀಸ್ ಠಾಣೆಗೆ ಹೋಗಿ ಆತನ ವಿರುದ್ಧ ದೂರು ದಾಖಲಿಸಿದ್ದಾಳೆ.
ವಿಡಿಯೋ ಆನ್ಲೈನ್ನಲ್ಲಿ ವೈರಲ್ ಆದ ನಂತರ, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಆರೋಪಿಯನ್ನು ತಕ್ಷಣವೇ ಬಂಧಿಸಲು ಯಶಸ್ವಿಯಾಗಿದ್ದಾರೆ. ಇನ್ನು ಈ ಕುರಿತು ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆ ಕುರಿತು ಸಮಾಜವಾದಿ ಪಕ್ಷವು ಉತ್ತರ ಪ್ರದೇಶದ ರಾಜ್ಯ ಸರ್ಕಾರವನ್ನು ಟೀಕಿಸಿದ್ದು, ಆಡಳಿತಾರೂಢ ಬಿಜೆಪಿ ಸರ್ಕಾರದ ಅಡಿಯಲ್ಲಿ ಮಹಿಳೆಯರ ಸುರಕ್ಷತೆ ಹದಗೆಟ್ಟಿದೆ ಎಂದು ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ. (ಏಜೆನ್ಸೀಸ್)