14 ವರ್ಷದ ಬಾಲಕಿ ಮೇಲೆ 9 ಮಂದಿಯಿಂದ ಅತ್ಯಾಚಾರ; ಐವರನ್ನು ಬಂಧಿಸಿದ ಪೊಲೀಸರು| POCSO Case

Untitled design - 2025-10-04T091933.361
Published on

POCSO Case: ಜಾರ್ಖಂಡ್​ನ ರಾಂಚಿಯ ರತು ಪ್ರದೇಶದಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಒಂಬತ್ತು ಮಂದಿ ಪುರುಷರು ಅತ್ಯಾಚಾರ ಮಾಡಿದ ಘಟನೆ ನಡೆದಿದ್ದು, ಅದರಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸೋಮವಾರ(ಅ. 13) ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ(ಅ. 12) ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

ಈ ಕುರಿತು ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ಪುಷ್ಕರ್, ಸೋಮವಾರ ಪೊಲೀಸರು ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗಿದೆ. ಇತರ ನಾಲ್ವರು ಆರೋಪಿಗಳನ್ನು ಹಿಡಿಯಲು ಶೋಧ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net