ದೆಹಲಿಯಲ್ಲಿ ರೈಲು ಹತ್ತುವ ವೇಳೆ ಕಾಲ್ತುಳಿತ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 15 ಭಕ್ತರು ದುರ್ಮರಣ

ವಿಜಯವಾಣಿ (8)
Published on

ದೆಹಲಿ: ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಲು ದೆಹಲಿ ರೈಲು ನಿಲ್ದಾಣದಲ್ಲಿ ಕಾಯುತ್ತಿದ್ದ ಭಕ್ತರು, ರೈಲು ಬಂದಿದ್ದೇ ತಡ ಏಕಾಏಕಿ ಹತ್ತಲು ಹೋದ ಹಿನ್ನೆಲೆ ಕಾಲ್ತುಳಿತ ಉಂಟಾಗಿ, 15 ಮಂದಿ ಸಾವಿಗೀಡಾಗಿದ್ದಾರೆ.

ರೈಲು ಬರುವುದು ಸ್ವಲ್ಪ ಸಮಯ ತಡವಾದ ಹಿನ್ನೆಲೆ ಭಾರೀ ಸಂಖ್ಯೆಯಲ್ಲಿ ಪ್ರಯಾಣಿಕರು ಫ್ಲಾಟ್​ಫಾರ್ಮ್​ನಲ್ಲಿ ಕಾಯುತ್ತಿದ್ದರು. ಈ ವೇಳೆ ರೈಲು ಬಂದಿದ್ದೇ ತಡ ಹತ್ತಲು ಮುಗಿಬಿದ್ದಿದ್ದಾರೆ. ಭಾರೀ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಿದ್ದೇ ಆದರೂ ದುರಾದೃಷ್ಟವಶಾತ್​ 15 ಮಂದಿ ಕೂಡ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಮೃತರ ಪೈಕಿ 11 ಮಹಿಳೆಯರು ಮತ್ತು ಮೂವರು ಮಕ್ಕಳು ಎಂದು ಹೇಳಲಾಗಿದೆ. ಇನ್ನೂ ಹಲವರು ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net