

ಕೋಲಾರ: ಕೋಲಾರ ಜಿಲ್ಲೆಯ ನರ್ಸಿಂಗ್ ಕಾಲೇಜೊಂದರಲ್ಲಿ 15 ವಿದ್ಯಾರ್ಥಿಗಳಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಕರೊನಾ ಕೇರ್ ಸೆಂಟರ್ಗೆ ಸೇರಿಸಿದ್ದು, ಕಾಲೇಜಿನ ಇತರ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕರೊನಾ ಪರೀಕ್ಷೆ ನಡೆಸಲಾಗುತ್ತಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ನ ನೂರುನ್ನೀಸ್ಸಾ ನರ್ಸಿಂಗ್ ಕಾಲೇಜಿಗೆ ಎರಡು ದಿನಗಳ ಹಿಂದೆ ಕೇರಳದಿಂದ ಬಂದಿದ್ದ ವಿದ್ಯಾರ್ಥಿಗಳಿಗೆ ನಿನ್ನೆ ಆರೋಗ್ಯಾಧಿಕಾರಿಗಳು ಆರ್ಟಿಪಿಸಿಆರ್ ಪರೀಕ್ಷೆ ಮಾಡಿದಾಗ ಸೋಂಕು ಕಂಡುಬಂದಿದೆ. ಒಟ್ಟು 15 ವಿದ್ಯಾರ್ಥಿಗಳಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ.
ಹೀಗಾಗಿ ಕಾಲೇಜಿನಲ್ಲಿದ್ದ ಸುಮಾರು 200 ವಿದ್ಯಾರ್ಥಿಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಸದ್ಯ ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿದೆ. ಇನ್ನು ಸೋಂಕಿತ ವಿದ್ಯಾರ್ಥಿಗಳನ್ನು ಕರೊನಾ ಕೇರ್ ಸೆಂಟರ್ಗೆ ಶಿಫ್ಟ್ ಮಾಡಲಾಗಿದ್ದು, ಕಾಲೇಜನ್ನು ಸೀಲ್ ಮಾಡಿ, ಸ್ಯಾನಿಟೈಸ್ ಮಾಡಲಾಗಿದೆ.