ಡಬಲ್​ ಟ್ರಾಲಿ ಟ್ರ್ಯಾಕ್ಟರ್​ ಪಲ್ಟಿ; ಅಂತ್ಯಕ್ರಿಯೆಗೆ ಹೊರಟಿದ್ದ 15ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Tractor 17 Jan 20
Published on

ವಿಜಯಪುರ: ಡಬಲ್​ ಟ್ರಾಲಿ ಟ್ರ್ಯಾಕ್ಟರ್​ ಪಲ್ಟಿಯಾಗಿ 15 ಮಂದಿ ಗಾಯಗೊಂಡ ಘಟನೆ ನಿಡಗುಂದಿ ತಾಲೂಕಿನ ಹೊಳೆಮಸೂತಿ ಬಳಿ ನಡೆದಿದೆ.

ಇವರೆಲ್ಲ ಸಂಬಂಧಿಕರೋರ್ವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೂದಿಹಾಳದಿಂದ ಸಿದ್ದರಾಪುರಕ್ಕೆ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್​ ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ತಗುಲಿದೆ.

ಇಬ್ಬರಿಗೆ ವಿದ್ಯುತ್​ ತಂತಿ ತಗುಲಿ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ವಿಜಯಪುರ ಹಾಗೂ ಬಾಗಲಕೋಟೆಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಿಡಗುಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net