15ರೊಳಗೆ ದೇಶೀಯ ವಿಮಾನ ಸಂಚಾರ ಸಾಧ್ಯತೆ

page 6 4
Published on

ನವದೆಹಲಿ: ದೇಶೀಯ ವಿಮಾನ ಸಂಚಾರ ಮೇ 15ರೊಳಗೆ ಆರಂಭವಾಗುವ ಸಾಧ್ಯತೆ ಇದೆ ಎಂಬ ಸುಳಿವನ್ನು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ನೀಡಿದ್ದಾರೆ. ಮುಂದಿನ ವಾರದಲ್ಲಿ ದೇಶೀಯವಾಗಿ ವಿಮಾನಗಳ ಓಡಾಟ ಆರಂಭಿಸುವ ಕುರಿತು ಗಂಭೀರ ಚಿಂತನೆ ನಡೆದಿದೆ.

ವಿಮಾನ ಕಾರ್ಯಾರಂಭಕ್ಕೆ ರಾಜ್ಯ ಸರ್ಕಾರಗಳ ಸಹಕಾರವೂ ಅಗತ್ಯ ಎಂದು ಆಂಗ್ಲ ನಿಯತಕಾಲಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ. ಹಸಿರು ವಲಯಗಳ ನಡುವೆ ನೇರ ವಿಮಾನ ಸಂಚಾರ ಆರಂಭಿಸುವ ಕುರಿತು ಪ್ರಧಾನಿ ಜತೆ ರ್ಚಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಆದರೆ, ಕೆಂಪು ವಲಯದಲ್ಲಿರುವ ದೇಶದ ನಾಲ್ಕು ಮಹಾನಗರ ಗಳನ್ನು ನಿರ್ಲಕ್ಷಿಸಲಾಗದು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net