

ಪಾಕಿಸ್ತಾನ: ( Quetta Railway Station ) ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ 16 ಜನರು ಸಾವನ್ನಪ್ಪಿದ್ದಾರೆ. 30 ಮಂದಿ ಗಾಯಗೊಂಡಿದ್ದಾರೆ ಎಂದು ಕ್ವೆಟ್ಟಾ ಹಿರಿಯ ಪೊಲೀಸ್ ಕಾರ್ಯಾಚರಣೆಯ ಅಧೀಕ್ಷಕ ಮೊಹಮ್ಮದ್ ಬಲೂಚ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸಾವಿನ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ತಲುಪಿದೆ. ಬಾಂಬ್ ಸ್ಕ್ವಾಡ್ ತಂಡಗಳನ್ನೂ ಸ್ಥಳಕ್ಕೆ ಕರೆತರಲಾಗಿದೆ. ಅಪಘಾತದ ತನಿಖೆ ನಡೆಸಲಾಗುತ್ತಿದೆ.
ಸ್ಫೋಟ ಸಂಭವಿಸಿದಾಗ ಸುಮಾರು 100 ಜನರು ಸ್ಥಳದಲ್ಲಿ ಇದ್ದರು ಎಂದು ಅವರು ಹೇಳಿದರು. ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ತಲುಪಿದ್ದಾರೆ ಎಂದು ಬಲೂಚಿಸ್ತಾನ ಸರ್ಕಾರದ ವಕ್ತಾರ ಶಾಹಿದ್ ರಿಂಡ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳವು ಅಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಘಟನೆಯ ಕುರಿತು ವರದಿ ಕೇಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಲಿನ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದರು. ಗಾಯಾಳುಗಳಿಗೆ ವೈದ್ಯಕೀಯ ನೆರವು ನೀಡಲಾಗುತ್ತಿದೆ ಎಂದು ಹೇಳಿದರು. ಸ್ಫೋಟ ಸಂಭವಿಸಿದಾಗ ರೈಲು ಪೇಶಾವರಕ್ಕೆ ಪ್ಲಾಟ್‌ಫಾರ್ಮ್‌ನಿಂದ ಹೊರಡಲು ಸಿದ್ಧವಾಗಿತ್ತು. ಸ್ಫೋಟದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.