

ಹಾಸನ: ರಾಜ್ಯದ ಕೆಲವು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಲ್ಲಿ ಕರೊನಾ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ವಸತಿ ಶಾಲೆಯೊಂದರಲ್ಲಿ ನಡೆಸಿದ ರಾಂಡಂ ಪರೀಕ್ಷೆಯಲ್ಲಿ ಕಳವಳಕಾರಿ ಫಲಿತಾಂಶ ತೋರಿಬಂದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಗೂರಮಾರನಹಳ್ಳಿಯ ಮುರಾರ್ಜಿ ವಸತಿ ಶಾಲೆಯಲ್ಲಿ ಕರೊನಾ ಪರೀಕ್ಷೆ ನಡೆಸಲಾಗಿ 16 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದ ಎಲ್ಲರನ್ನೂ ಆರೋಗ್ಯ ಇಲಾಖೆ ಅಧಿಕಾರಿಗಳು ಐಸೋಲೇಷನ್ಗೆ ಒಳಪಡಿಸಿದ್ದಾರೆ. ಇನ್ನಷ್ಟು ಮಕ್ಕಳಿಗೆ ಸೋಂಕು ತಗುಲಿರುವ ಭೀತಿ ಇರುವುದರಿಂದ ಉಳಿದ ವಿದ್ಯಾರ್ಥಿಗಳನ್ನೂ ಪ್ರತ್ಯೇಕವಾಗಿರಿಸಿ ಆರೋಗ್ಯದ ಮೇಲೆ ನಿಗಾ ವಹಿಸಲಾಗುತ್ತಿದೆ.