16ರಂದು ಗುಂಡ್ಲುಪೇಟೆಯಲ್ಲಿ ಉದ್ಯೋಗ ಮೇಳ

06-GPT-2- (1)
ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಗಣೇಶ್ ಪ್ರಸಾದ್ ಮಾತನಾಡಿದರು. ನಂಜುಂಡಪ್ರಸಾದ್, ಮಹೇಶ್ ಇದ್ದರು.
Published on

ಗುಂಡ್ಲುಪೇಟೆ: ದಿ.ಎಚ್.ಎಸ್.ಮಹದೇವಪ್ರಸಾದ್ ಟ್ರಸ್ಟ್ ಮತ್ತು ಅಕ್ಷರ ಫೌಂಡೇಷನ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಕಾರದೊಂದಿಗೆ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಅರ್ಹರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್ ಮನವಿ ಮಾಡಿದರು.

ಮಾ.16ರಂದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನ ಎದುರಿನ ಮೈದಾನದಲ್ಲಿ ಮೇಳ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಸ್ಥಳದಲ್ಲಿಯೇ ನೇಮಕಾತಿ ಮಾಡಿಕೊಳ್ಳಲಾಗುವುದು. ಸುಮಾರು 80 ಕ್ಕೂ ಹೆಚ್ಚು ಕಂಪನಿಗಳು ಆಗಮಿಸುವುದರಿಂದ ಯುವಕ-ಯುವತಿಯರಿಗೆ ಅನುಕೂಲವಾಗಲಿದೆ. ತಾಲೂಕಿನ ವಿದ್ಯಾವಂತ ನಿರುದ್ಯೋಗಿಗಳು ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುನಿರಾಜು, ಪಿ.ಬಿ.ರಾಜಶೇಖರ್, ಪುರಸಭೆ ಸದಸ್ಯರಾದ ಇಲಿಯಾಸ್, ಕಣ್ಣಪ್ಪ, ಕಾರ್ಗಳ್ಳಿ ಸುರೇಶ್, ಎಪಿಎಂಸಿ ನಿರ್ದೇಶಕ ಬಸವರಾಜು, ವೀರನಪುರ ಗುರು ಸುದ್ದಿಗೋಷ್ಠಿಯಲ್ಲಿದ್ದರು.

ಫೋಟೋ: 06-ಜಿಪಿಟಿ-2
ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಗಣೇಶ್ ಪ್ರಸಾದ್ ಮಾತನಾಡಿದರು. ನಂಜುಂಡಪ್ರಸಾದ್, ಮಹೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net