BBKS11: 'ಬಿಗ್'​ ಮನೆಗೆ ಅಧಿಕೃತವಾಗಿ ಎಂಟ್ರಿಕೊಟ್ಟ 17 ಸ್ಪರ್ಧಿಗಳು ಇವರೇ ನೋಡಿ

17 contestants
Published on
ಬೆಂಗಳೂರು: ರಿಯಾಲಿಟಿ ಶೋಗಳ ಪೈಕಿ ಅತೀ ದೊಡ್ಡ ರಿಯಾಲಿಟಿ ಶೋ ಎಂದೇ ಖ್ಯಾತಿ ಗಳಿಸಿರುವ ಕನ್ನಡ ಬಿಗ್ ಬಾಸ್ (BiggBoss) ಮನರಂಜನಾ ಕಾರ್ಯಕ್ರಮಕ್ಕೆ ಇದೀಗ ಹೊಸ ರೂಪ ಸಿಕ್ಕಿದ್ದು,​ ಸೀಸನ್ 10ರ ಯಶಸ್ಸಿನ ನಂತರ ಸೀಸನ್​ 11 ಸಖತ್ ಸದ್ದು ಮಾಡುತ್ತಿದೆ. ಸತತ 11 ಸೀಸನ್​ಗಳನ್ನು ತಮ್ಮ ಖಡಕ್​ ಮಾತು, ವಿಭಿನ್ನ ಶೈಲಿಯಿಂದಲೇ ಅಚ್ಚುಕಟ್ಟಾಗಿ, ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep)​, ಒಂದಷ್ಟು ಗೊಂದಲಗಳ ನಡುವೆ ಅಂತಿಮವಾಗಿ ಈ ಬಾರಿಯೂ ಕಾರ್ಯಕ್ರಮದ ಮುಂದಾಳತ್ವ ವಹಿಸಿದ್ದು ಇದೀಗ ಇದೀಗ ಅವರ ಅಪಾರ ಅಭಿಮಾನಿ ಬಳಗಕ್ಕೆ ಭಾರೀ ಖುಷಿ ನೀಡಿದೆ. ಈ ಮಧ್ಯೆ ಇಂದು ನಡೆಯುತ್ತಿರುವ ಗ್ರ್ಯಾಂಡ್​ ಓಪನಿಂಗ್​ ಕಾರ್ಯಕ್ರಮದಲ್ಲಿ ಮೊದಲ ಸ್ಪರ್ಧಿಯಾಗಿ ಕಿರುತೆರೆ ನಟಿ ಭವ್ಯ ಗೌಡ ಎಂಟ್ರಿ ಕೊಟ್ಟರೆ, ಎರಡನೇ ಸ್ಪರ್ಧಿ ಆಗಿ ನಟಿ ಯಮುನಾ ಬಲಗಾಲಿಟ್ಟು ಒಳಗೆ ಬಿಗ್​ ಮನೆಯೊಳಗೆ ಪ್ರವೇಶಿಸಿದ್ದಾರೆ.

ಇದನ್ನೂ ಓದಿ: ಮಗನ ಸಾವಿಗೆ ನ್ಯಾಯ ಕೊಡಿಸುವವರೆಗೂ ಕದಲಲ್ಲ

ಈ ಬಾರಿಯ ಬಿಗ್​ ಬಾಸ್​ ಸೀಸನ್​ 11ರಲ್ಲಿ ಸ್ವರ್ಗ ಮತ್ತು ನರಕ ಕಾನ್ಸೆಪ್ಟ್​ ವೀಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಮನೆ ಹೇಗಿರಲಿದೆ? ಯಾರು ಯಾವ ಜಾಗಕ್ಕೆ ಸೇರುತ್ತಾರೆ ಎಂಬ ಪ್ರಶ್ನೆ ಬೆಂಬಿಡದೆ ಕಾಡುತ್ತಿತ್ತು. ಆದ್ರೆ, ಈ ಎಲ್ಲಾ ಗೊಂದಲಗಳಿಗೆ ಇದೀಗ ತೆರೆ ಬಿದ್ದಿದೆ. ಗ್ರ್ಯಾಂಡ್​ ಓಪನಿಂಗ್ ಕಾರ್ಯಕ್ರಮಕ್ಕೂ ಮುನ್ನವೇ ಇವರು ಬರುತ್ತಾರೆ, ಅವರ ಎಂಟ್ತಿ ಇರುವುದು ಪಕ್ಕಾ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿತ್ತಿತ್ತು. ಅಸಲಿಗೆ ಬಿಗ್ ಮನೆಯೊಳಗೆ ಯಾರೆಲ್ಲಾ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ ಎಂಬುದರ ಸಂಪೂರ್ಣ ವಿವರ ಹೀಗಿದೆ ಗಮನಿಸಿ.

biggboss

ಧನರಾಜ್​ ಆಚಾರ್​, ಗೌತಮಿ ಜಾಧವ್​, ಲಾಯರ್​ ಜಗದೀಶ್​, ತ್ರಿವಿಕ್ರಮ್​, ಯಮುನಾ ಶ್ರೀನಿಧಿ, ಭವ್ಯಾ, ಹಂಸಾ ಪ್ರತಾಪ್​, ಐಶ್ವರ್ಯಾ ಶಿಂಧೋಗಿ, ಅನುಷಾ ರೈ, ಶಿಶಿರ್​ ಶಾಸ್ತ್ರಿ, ಗೋಲ್ಡ್​ ಸುರೇಶ್​, ಮಾನಸಾ ಸಂತೋಷ್​, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ, ಉಗ್ರಂ ಮಂಜು,

ಸ್ವರ್ಗ ಸೇರಿದ ಸ್ಪರ್ಧಿಗಳು: ಧನರಾಜ್​ ಆಚಾರ್​, ಗೌತಮಿ ಜಾಧವ್​, ಲಾಯರ್​ ಜಗದೀಶ್​, ತ್ರಿವಿಕ್ರಮ್​, ಯಮುನಾ ಶ್ರೀನಿಧಿ, ಭವ್ಯಾ, ಹಂಸಾ ಪ್ರತಾಪ್​, ಐಶ್ವರ್ಯಾ ಶಿಂಧೋಗಿ ಮತ್ತು ಉಗ್ರಂ ಮಂಜು.

ನರಕಕ್ಕೆ ಹೋದ ಸ್ಪರ್ಧಿಗಳು: ಅನುಷಾ ರೈ, ಶಿಶಿರ್​ ಶಾಸ್ತ್ರಿ, ಗೋಲ್ಡ್​ ಸುರೇಶ್​, ಮಾನಸಾ ಸಂತೋಷ್​, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ ಮತ್ತು ರಂಜಿತ್​.

https://www.vijayavani.net/special-power-to-these-2-inside-biggboss-11

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net