ರಾಜ್ಯದಲ್ಲಿ 175ಕ್ಕೇರಿದ ಕರೊನಾ ಸೋಂಕಿತರ ಸಂಖ್ಯೆ

Corona
Published on

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 78 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿದ್ದು, ಒಂದು ಇದರೊಂದಿಗೆ ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 175ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಓರ್ವ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದಿನದ ಸೋಂಕು ಪ್ರಮಾಣ ದರ ಶೇ. 3. 29 ಹಾಗೂ ಮರಣ ಪ್ರಮಾಣ ದರ ಶೇ. 1.28 ತಲುಪಿದೆ.

ರಾಜ್ಯದಲ್ಲಿ 2,366 ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ 68, ಚಿಕ್ಕಮಗಳೂರಿನಲ್ಲಿ 4, ರಾಮನಗರ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ ಇಬ್ಬರು ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರಿನಲ್ಲಿ ತಲಾ ಒಬ್ಬರು ಸೇರಿ 78 ಮಂದಿ ಸೋಂಕಿಗೆ ಒಳಗಾಗಿದ್ದಾರೆ.

ಸೋಂಕಿತರಲ್ಲಿ 162 ಮಂದಿ ಮನೆ ಆರೈಕೆಯಲಿದ್ದು, 6 ಮಂದಿ ತುರ್ತು ನಿಗಾ ಘಟಕದಲ್ಲಿ ಹಾಗೂ 7 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ ದಾಖಲಾಗಿದ್ದು ಒಟ್ಟು 13 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net