

ರಾಂಚಿ: ಜಾರ್ಖಂಡ್‌ನ 18 ಬಿಜೆಪಿ ಶಾಸಕರು ನಾಳೆ ( ಆಗಸ್ಟ್ 2) ಎರಡು ಗಂಟೆಯವರೆಗೆ ವಿಧಾನಸಭೆಯಿಂದ ಅಮಾನತುಗೊಳಿಸಲಾಯಿತು. ಮಾರ್ಷಲ್ಗಳ ಸಹಾಯದಿಂದ ಶಾಸಕರನ್ನು ಇಂದು ಸದನದಿಂದ ಹೊರಗೆ ಕಳುಹಿಸಲಾಯಿತು.
ನಿನ್ನೆ ವಿರೋಧ ಪಕ್ಷದ ಶಾಸಕರನ್ನು ಸದನದಿಂದ ಹೊರಹಾಕಿದ್ದನ್ನು ವಿರೋಧಿಸಿ ಮತ್ತು ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ತಮ್ಮ ಪ್ರಶ್ನಿಗೆ ಉತ್ತರಿಸಲು ನಿರಾಕರಿಸಿದ್ದನ್ನು ಖಂಡಿಸಿ ಗುರುವಾರ ಸದನನಕ್ಕೆ ಅಡ್ಡಿಪಡಿಸಿದ ಕಾರಣದಿಂದ ಸ್ಪೀಕರ್ ರವೀಂದ್ರ ನಾಥ್ ಮಹ್ತೋ ಅವರು ಬಿಜೆಪಿ ಸದಸ್ಯರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಸಿಎಂ ಹೇಮಂತ್ ಸೂರೇನ್ ಅವರು ಉದ್ಯೋಗ ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಿಲ್ಲವೆಂದು ಸದನದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು.
ಸದನ ಆರಂಭಕ್ಕೂ ಮುನ್ನ ಬಿಜೆಪಿ ಶಾಸಕರು ಬಾವಿಗೆ ನುಗ್ಗಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಸದನದ ಬಾವಿಯಲ್ಲಿದ್ದ ಕೆಲವು ದಾಖಲೆಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕಲಾಪ ಆರಂಭಕ್ಕೂ ಮುನ್ನವೇ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ತೀವ್ರ ವಾಗ್ವಾದಕ್ಕಿಳಿದಿದ್ದು ಕಂಡುಬಂತು.
ಮಾರ್ಷಲ್‌ಗಳು ತಮ್ಮನ್ನು ಸದನದಿಂದ ಹೊರ ಹಾಕಿದ ನಂತರ ಜಾರ್ಖಂಡ್‌ನ ಹಲವಾರು ಬಿಜೆಪಿ ಶಾಸಕರು ಬುಧವಾರ ವಿಧಾನಸಭೆಯ ಮೊಗಸಾಲೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದರು. ವಿಧಾನಸಭೆಯ ನೈತಿಕ ಸಮಿತಿಯು ಈ ಬಗ್ಗೆ ತನಿಖೆ ನಡೆಸಿ ಒಂದು ವಾರದೊಳಗೆ ವರದಿಯನ್ನು ಅವರಿಗೆ ಸಲ್ಲಿಸಲಿದೆ ಎಂದು ಸ್ಪೀಕರ್ ಹೇಳಿದರು. ನಂತರ ಸದನವನ್ನು ಮಧ್ಯಾಹ್ನ 12.30ಕ್ಕೆ ಮುಂದೂಡಿದರು.