ಮಗುಚಿದ ಬೋಟ್​; 18 ಜನರು ನಾಪತ್ತೆ; ಮೂವರು ದುರ್ಮರಣ!

Untitled design - 2023-11-01T205704.030
Published on

ಪಾಟ್ನಾ, ಬಿಹಾರ: ಸರಯು ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ 18 ಮಂದಿ ನಾಪತ್ತೆಯಾದ ಘಟನೆ ಬಿಹಾರದ ಛಪ್ರಾದ ಮಾಂಝಿಯ ಮಟಿಯಾರ್ ಘಾಟ್ ಬಳಿ ಸಂಭವಿಸಿದೆ.

ಘಟನೆಯ ಬೆನ್ನಲ್ಲೇ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳು ದೌಡಾಯಿಸಿದ್ದು, ಚುರುಕು ಶೋಧ ಕಾರ್ಯ ಕೈಗೊಂಡಿದ್ದಾರೆ.

ನೀರಿನ ರಭಸಕ್ಕೆ ದೋಣಿ ಮಗುಚಿ ಬಿದ್ದಾಗ ಸ್ಥಳೀಯರು ಮೂವರನ್ನು ರಕ್ಷಿಸಿದ್ದು, ಉಳಿದವರು ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಉಳಿದವರನ್ನು ಪತ್ತೆ ಹಚ್ಚಲು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net