

ಬೆಂಗಳೂರು: ರಾಜ್ಯದಲ್ಲಿ ಸುರಿದ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಚರಂಡಿ, ಸೇತುವೆ ಕಾಮಗಾರಿಗಳ ಕ್ರಿಯಾ ಯೋಜನೆ ಸಲ್ಲಿಸುವಂತೆ ಎಲ್ಲ ಜಿ.ಪಂ. ಸಿಇಒಗಳಿಗೆ ಸರ್ಕಾರ ಸೂಚಿಸಿದೆ.
2024-25ನೇ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಿಂದಾಗಿ ಗ್ರಾಮೀಣ ರಸ್ತೆಗಳು ತೀವ್ರ ಹಾನಿಯಾಗಿರುವ ಹಿನ್ನೆಲೆಯಲ್ಲಿ ಈ ರಸ್ತೆಗಳ ಸುಧಾರಣೆಗೆ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ.ಗಳಂತೆ 1890 ಕೋಟಿ ರೂ. ಅನುದಾನವನ್ನು(1890 crore allocation for rural road improvement) ಆರ್ಥಿಕ ಇಲಾಖೆ ಹಂಚಿಕೆ ಮಾಡಿದೆ.
ಹಂಚಿಕೆಯಾಗಿರುವ ಅನುದಾನಕ್ಕೆ ಆಯಾ ಕ್ಷೇತ್ರಗಳ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಕ್ರಿಯಾ ಯೋಜನೆಯನ್ನು ಕ್ಷೇತ್ರವಾರು ಪಡೆದು ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.