ಆಗಸ್ಟ್ 1 ರಂದು ವ್ಯಸನ ಮುಕ್ತ ದಿನಾಚರಣೆ

drugs
Published on

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿದ್ಯಾವಿಕಾಸ ಇಂಜಿನಿಯರಿoಗ್ ಕಾಲೇಜು ಮೈಸೂರು ಇವರುಗಳ ಸಹಯೋಗದಲ್ಲಿ ಆಗಸ್ಟ್ 01 ರಂದು ಬೆಳಗ್ಗೆ 11 ಗಂಟೆಗೆ ವಿದ್ಯಾವಿಕಾಸ ಇಂಜಿನಿಯರಿoಗ್ ಕಾಲೇಜಿನಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಪ್ರಯುಕ್ತ “ವ್ಯಸನ ಮುಕ್ತ ದಿನಾಚರಣೆ”ಯನ್ನು ಹಮ್ಮಿಕೊಳ್ಳಲಾಗಿದೆ.

ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರು ಘನ ಉಪಸ್ಥಿತಿ ಇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್ ಸಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್ ಅವರು ಆಗಮಿಸಲಿದ್ದಾರೆ.

ಸಮಾರಂಭದ ಅತಿಥಿಗಳಾಗಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ ಹರೀಶ್ ಗೌಡ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್, ಹಾಗೂ ವಿಧಾನ ಪರಿಷತ್ನ ಸದಸ್ಯರುಗಳಾದ ಹೆಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಡಾ. ಯತಿಂದ್ರ. ಎಸ್, ಮಧು ಜಿ.ಮಾದೇಗೌಡ ಹಾಗೂ ವಿವೇಕಾನಂದ.ಎಸ್, ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಮರಿಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಶೇಷ ಅಹ್ವಾನಿತರಾಗಿ ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಕವೀಶ್ ಗೌಡ ವಿ ಹಾಗೂ ಇಂಡಿಯನ್ ಎಕ್ಸ್ ಪ್ರೆಸ್ ದಿನಪತ್ರಿಕೆಯ ಹಿರಿಯ ಸಹಾಯಕ ಸಂಪಾದಕರಾದ ಶಿವಕುಮಾರ್ ಕೆ. ಅವರು ಉಪಸ್ಥಿತರಿರಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net