ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ: ಏಪ್ರಿಲ್ 20ರ ತನಕ ಪೂರಕ ಪರೀಕ್ಷೆ ನೋಂದಣಿಗೆ ಅವಕಾಶ

result
Published on

ಬೆಂಗಳೂರು ರಾಜ್ಯಾದ್ಯಂತ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಫಲಿತಾಂಶವನ್ನು ಶನಿವಾರ ಪ್ರಕಟಿಸಲಾಗಿದೆ.

ಕಾಲೇಜು ಹಂತದಲ್ಲಿಯೇ ಪರೀಕ್ಷೆ ನಡೆಸಿದ್ದರಿಂದ ಫಲಿತಾಂಶವನ್ನು ಕೂಡ ಕಾಲೇಜು ಹಂತದಲ್ಲಿಯೇ ನೀಡಲಾಗಿದೆ. ಈ ಸಂಬಂಧ ಯಾವುದೇ ದತ್ತಾಂಶಗಳನ್ನು ನಮ್ಮಲ್ಲಿ ಲಭ್ಯವಿಲ್ಲವೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮೇ 20 ರಿಂದ 31ರವರೆಗೆ

ಪೂರಕ ಪರೀಕ್ಷೆ ನಡೆಸಲಾಗುತ್ತದೆ. ಪೂರಕ ಪರೀಕ್ಷೆ ನಡೆಸುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಉಪನಿರ್ದೇಶಕರಿಗೆ ವಹಿಸಿದೆ. ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿಯನ್ನು ಮಂಡಳಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಜೂ.6ರಂದು ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net