2 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ; ಕೆಐಎ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ

kia (5)
Published on

ಬೆಂಗಳೂರು: ವಿದೇಶದಿಂದ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ 16 ಪ್ರಯಾಣಿಕರನ್ನು ಬಂಧಿಸಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಕಸ್ಟಮ್ಸ್ ಅಧಿಕಾರಿಗಳು 2 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ.

ಡಿ. 25ರಿಂದ 29ರವರೆಗೆ ಕೌಲಾಲಂಪುರ, ಬ್ಯಾಂಕಾಕ್, ಶಾರ್ಜಾಗಳಿಂದ ಕೆಐಎಗೆ ಬಂದಿಳಿದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದರು. ಐವರು ಪುರುಷರು ಮತ್ತು 11 ಮಹಿಳಾ ಪ್ರಯಾಣಿಕರ ಬಗ್ಗೆ ಅನುಮಾನ ವ್ಯಕ್ತವಾಗಿ ಕೂಲಂಕಷವಾಗಿ ತಪಾಸಣೆ ಮಾಡಿದಾಗ ಕಳ್ಳಾಟ ಬಯಲಾಗಿದೆ.

ಕೆಲವರು ಶೂ ಸಾಕ್ಸ್, ಒಳ ಉಡುಪು, ಕರವಸ, ಪರ್ಸ್‌ಗಳಲ್ಲಿ ಪೇಸ್ಟ್ ರೂಪದ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದುದು ಕಂಡುಬಂದಿತ್ತು. ಅಂದಾಜು 2 ಕೋಟಿ ರೂ. ಮೌಲ್ಯದ 3 ಕೆ.ಜಿ.311 ಗ್ರಾಂ ಚಿನ್ನ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net