ಗಣೇಶನ ಮೆರವಣಿಗೆ ವೇಳೆ ವಿದ್ಯುತ್​ ಅವಘಡ; ಇಬ್ಬರು ಮೃತ್ಯು

lord ganesha
Published on

ಭೋಪಾಲ್: ಗಣೇಶನ ಮೆರವಣಿಗೆ ವೇಳೆ ವಿದ್ಯುತ್​ ತಂತಿ ತಗುಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಛಿಂದ್​ವಾರಾ ಜಿಲ್ಲೆಯ ತಾರಾ ಕಾಲೋನಿಯಲ್ಲಿ ನಡೆದಿದೆ.

ಮೃತರನ್ನು ರಾಹುಲ್​ ಠಾಕೂರ್​ (38), ಸಂಜಯ್​ ಚೌರೆ (22) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ 30 ವರ್ಷದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಛಿಂದ್​ವಾರಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿನಾಯಕ್​ ವರ್ಮಾ ಘಟನೆಯೂ ಶನಿವಾರ ರಾತ್ರಿ 9 ಘಂಟೆ ಸುಮಾರಿಗೆ ನಡೆದಿದ್ದು, ಗಣೇಶನ ಮೂರ್ತಿ ಇಡಲಾಗಿದ್ದ ಟ್ರ್ಯಾಕ್ಟರ್​ 11 ಸಾವಿರ ವೋಲ್ಟೇಜ್​ ಇರುವ ವಿದ್ಯುತ್​ ತಂತಿಗೆ ತಾಗಿದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಛಿಂದ್​ವಾರಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿನಾಯಕ್​ ವರ್ಮಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net