

ಬೆಂಗಳೂರು: ಫುಡ್ ಡೆಲಿವರಿ ಬಾಯ್ ವೇಷದಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಧಿಸಿದ್ದಾರೆ.
ಅಭಿಜಿತ್ ಮತ್ತು ಶಿಬು ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಆರೋಪಿಗಳಿಬ್ಬರು ಸಿಕ್ಕಿಬಿದ್ದಿದ್ದಾರೆ. ಸ್ವಿಗ್ಗಿ ಮತ್ತು ಝೊಮಾಟೋ ಫುಡ್ ಡೆಲಿವರಿ ಬಾಯ್ ವೇಷದಲ್ಲಿ ಅಭಿಜಿತ್ ಡ್ರಗ್ಸ್ ಸಾಗಾಟ ಮಾಡುತ್ತಿದ್ದ.
ನೈಜೀರಿಯಾ ಮೂಲದ ವ್ಯಕ್ತಿಯಿಂದ ಡ್ರಗ್ಸ್ ಖರೀದಿ ಮಾಡಿ ಮಾರಾಟ ಮಾಡುತ್ತಿದ್ದರು. ಇಬ್ಬರು ಆರೋಪಿಗಳಿಂದ 9 ಲಕ್ಷ ಮೌಲ್ಯದ ವಿವಿಧ ರೀತಿಯ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.