ಕುಮದ್ವತಿ ಶಾಲೆಗೆ 2 ಬಂಗಾರ, 5 ಬೆಳ್ಳಿ

25-ಎಸ್ಕೆಪಿ-1
ಶಿಕಾರಿಪುರದಲ್ಲಿ ಜೂಡೋ ಸ್ಪರ್ಧೆಯ ಪದಕ ವಿಜೇತ ವಿದ್ಯಾರ್ಥಿಗಳನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸನ್ಮಾನಿಸಿದರು. ಕೆ.ಎಸ್.ಗುರುಮೂರ್ತಿ, ಪಾಲಾಕ್ಷಪ್ಪ, ಡಿ.ಬಿ.ಮಿಥುನ್ ಇತರರಿದ್ದರು.
Published on

ಶಿಕಾರಿಪುರ: ಕುಮುದ್ವತಿ ಶಾಲೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗಳಿಸುತ್ತಿರುವುದು ಶ್ಲಾಘನೀಯ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ರಾಷ್ಟ್ರ ಮಟ್ಟದ ಜೂಡೋ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ, ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು. ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಾಷ್ಟ್ರ ಮಟ್ಟದ ಜೂಡೋ ಸ್ಪರ್ಧೆಯಲ್ಲಿ ಕುಮುದ್ವತಿ ರೆಸಿಡೆನ್ಸಿಯಲ್ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳು ಎರಡು ಬಂಗಾರದ ಪದಕ ಹಾಗೂ ಐದು ಬೆಳ್ಳಿ ಪದಕ ವಿಜೇತರಾಗಿದ್ದಾರೆ.

ಅ.7ರಿಂದ 11ರವರೆಗೆ ಜಾರ್ಖಂಡ್‌ನ ರಾಂಚಿಯಲ್ಲಿ ಏರ್ಪಡಿಸಿರುವ ಸಿಬಿಎಸ್‌ಸಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವರು. ಇವರಿಗೆ ಜಿಲ್ಲಾ ಜೂಡೋ ತರಬೇತುದಾರ ಡಿ.ಬಿ.ಮಿಥುನ್ ತರಬೇತಿ ನೀಡುತ್ತಿದ್ದಾರೆ. ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಪುರಸಭೆ ಸದಸ್ಯ ಪಾಲಾಕ್ಷಪ್ಪ, ತರಬೇತುದಾರ ಡಿ.ಬಿ.ಮಿಥುನ್, ವಿದ್ಯಾರ್ಥಿಗಳಾದ ಜಯಲಕ್ಷ್ಮೀ, ಗಣೇಶ್, ಧರಣಿ, ವೈಷ್ಣವಿ, ಮೋಕ್ಷಾ, ವರುಣ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net