

ಪಶ್ಚಿಮ ಬಂಗಾಳ: ಪೊಲೀಸ್ ಗಸ್ತುವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಬ್ಇನ್ಸ್ಪೆಕ್ಟರ್ ಸೇರಿದಂತೆ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರು ತೀವ್ರ ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಬಗ್ನಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಬರುಂಡಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 16 ರಲ್ಲಿ ಸಂಭವಿಸಿದೆ.
ಮೃತರನ್ನು ಸಬ್ ಇನ್‌ಸ್ಪೆಕ್ಟರ್ ಸುಜೋಯ್ ದಾಸ್ (45) ಮತ್ತು ಹೋಮ್ ಗಾರ್ಡ್ ಪಲಾಶ್ ಸಮಂತ (31) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಚಾಲಕ ಅಬು ಬಕರ್ (28) ಮತ್ತು ಗೃಹ ರಕ್ಷಕ ದಳದ ಸುಖದೇಬ್ ಬಿಸ್ವಾಸ್ (25) ಮತ್ತು ಅಲೋಕ್ ಬಾರ್ (26) ಎಂದು ಗುರುತಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾ ಮೂಲದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆ ಬದಿಯಲ್ಲಿ ನಿಂತಿದ್ದ ಪೊಲೀಸರ ಗಸ್ತು ತಿರುಗುವ ವಾಹನದ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದೆದಿದೆ. ಈ ದುರ್ಘಟನೆ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೌರಾ ಎಸ್‌ಪಿ ಸ್ವಾತಿ ಭಂಗಾಲಿಯಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.