

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯ ಗುಂಡಿನ ದಾಳಿಗೆ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರು ಬಲಿಯಾಗಿದ್ದಾರೆ.
ದಕ್ಷಿಣ ಕಾಶ್ಮೀರದ ಬಿಜ್ಬೆಹಾರಾದ ಸಂಗಮ್ನಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಅವರನ್ನು ಹುಡುಕುವ ಕಾರ್ಯಾಚರಣೆ ನಡೆಯುತ್ತಿತ್ತು. ಇದೇ ವೇಳೆ ಉಗ್ರರು ಮತ್ತು ರಕ್ಷಣಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯಿತು.
ಮೃತ ಉಗ್ರರಿಬ್ಬರೂ ಲಷ್ಕರ್ ಎ ತೊಯ್ಬಾ ಸಂಘಟನೆಗೆ ಸೇರಿದವರು. ರಕ್ಷಣಾ ಸಿಬ್ಬಂದಿಗೆ ಯಾರಿಗೂ ಏನೂ ಅಪಾಯ ಆಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಉಗ್ರರಿಂದ ಎಕೆ 47 ಸೇರಿ ಮಾರಕ ಅಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್)