ಆಹಾರ ನುಂಗಲು ಕಷ್ಟಪಡುತ್ತಿದ್ದ ವ್ಯಕ್ತಿಯ ಅನ್ನನಾಳದಲ್ಲಿ ಸಿಕ್ತು 100ರೂ. 2 ನೋಟು!

Stomach pain
Published on

ಕೋಲ್ಕತ್ತಾ: ಕಳೆದ ಒಂದು ತಿಂಗಳಿನಿಂದ ಆಹಾರ ನುಂಗಲು ಕಷ್ಟಪಡುತ್ತಿದ್ದ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬನು ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದನು. ಈ ರೋಗಿಯ ಹೊಟ್ಟೆಯಲ್ಲಿ ನೋಟುಗಳು ಪತ್ತೆಯಾಗಿವೆ.

ಈ ರೋಗಿಯು ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದವನಾಗಿದ್ದು, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆತನನ್ನು ಚಿಕಿತ್ಸೆಗೆ ಒಳಪಡಿಸಿದಾಗ ಅನ್ನನಾಳದಲ್ಲಿ 100 ರೂಪಾಯಿಯ ಎರಡು ನೋಟುಗಳು ಇರುವುದು ಪತ್ತೆಯಾಗಿದೆ.

ಕೂಡಲೇ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಅನ್ನನಾಳದಲ್ಲಿ ಸಿಕ್ಕಿಹಾಕಿಕೊಂಡಿದ್ದ 100 ಎರಡು ನೋಟುಗಳನ್ನು ಹೊರ ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾದ ರೋಗಿ ಚೇತರಿಸಿಕೊಂಡಿದ್ದು, ಬಳಿಕ ವೈದ್ಯರು ಆತನನ್ನು ಮನೆಗೆ ಕಳುಹಿಸಿಕೊಟ್ಟಿದ್ದಾರೆ. ಇದಕ್ಕೂ ಮೊದಲು ಆತನ ಮಾನಸಿಕ ಸಮಸ್ಯೆಯ ಕುರಿತು ತಪಾಸಣೆ ಮಾಡಿ ಆರೋಗ್ಯ ವೃದ್ಧಿಗೆ ಸಲಹೆ ಸೂಚನೆ ನೀಡಿದ್ದಾರೆ.

ವೈದ್ಯರು ಮಾಹಿತಿ ನೀಡಿದ ಪ್ರಕಾರ, ರಾಟ್‌ ಟೂತ್ ಫೋರ್ಸ್ಪ್ ಬಳಸಿ ಎಂಡೋಸ್ಕೋಪಿಕ್ ಮೂಲಕ ಎರಡೂ ಕರೆನ್ಸಿ ನೋಟುಗಳನ್ನು ಒಂದೊಂದಾಗಿ ಹೊಟ್ಟೆಯಿಂದ ತೆಗೆಯಲಾಗಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net