

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಸೆಕ್ಟರ್ನ ಗಡಿ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆ (ಎಲ್ಒಸಿ)ಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಪರಿಣಾಮ ಇಬ್ಬರ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ.
ಗುರುವಾರ ನಸುಕಿನ ವೇಳೆ ಈ ಗುಂಡಿನ ದಾಳಿ ನಡೆದಿತ್ತು. ಮೋರ್ಟಾರ್ಸ್ ಮತ್ತು ಇತರೆ ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಲಾಗಿತ್ತು. ಎಲ್ಒಸಿ ಸಮೀಪದಲ್ಲಿ ನಿರಂತರವಾಗಿ ನಡೆದ ದಾಳಿಯ ಪರಿಣಾಮ ಇಬ್ಬರು ಯೋಧರು ಹುತಾತ್ಮರಾದರು. ನಾಲ್ವರು ಗಾಯಗೊಂಡರು ಎಂದು ಶ್ರೀನಗರದಲ್ಲಿರುವ ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದರು.
ಅಪ್ರಚೋದಿತ ದಾಳಿಗೆ ಭಾರತೀಯ ಸೇನೆಯೂ ಸರಿಯಾದ ಪ್ರತಿಕ್ರಿಯೆ ನೀಡಿದೆ. ಈ ನಡುವೆ, ಗಾಯಗೊಂಡವರನ್ನು ಕೂಡಲೇ ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ತಿಳಿಸಿದರು. (ಏಜೆನ್ಸೀಸ್)