ಜಮ್ಮು-ಕಾಶ್ಮೀರದಲ್ಲಿ ಎನ್​ಕೌಂಟರ್: ಇಬ್ಬರು ಉಗ್ರಗಾಮಿಗಳ ಹತ್ಯೆ

mili
Published on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್​ನ ರೆಡ್ವಾನಿ ಪಯೀನ್​ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿ ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರಗಾಮಿಗಳು ಮೃತಪಟ್ಟಿದ್ದಾರೆ ಎಂದು ಸೇನೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಭಯೋತ್ಪಾದಕರ ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತ ಉಗ್ರರ ಗುರುತು ಪತ್ತೆಹಚ್ಚುವ ಕಾರ್ಯನಡೆಯುತ್ತಿದೆ. ಅಲ್ಲದೇ ಉಗ್ರರ ಅಡಗುದಾಣದಲ್ಲಿ ಸೇನೆ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಈ ಪ್ರದೇಶದ ಸುತ್ತಮುತ್ತ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಲೇ ಇದೆ.

ಎನ್‍ಕೌಂಟರ್‌ನಲ್ಲಿ ಹತರಾದ ಉಗ್ರರು, ವಾಯುಪಡೆಯ ವಾಹನದ ಮೇಲೆ ದಾಳಿ ನಡೆಸಿದವರೇ ಎಂಬ ಅಧಿಕೃತ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 4 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸುರನ್‌ಕೋಟೆ ಪ್ರದೇಶದಲ್ಲಿ ಭಾರೀ ಭಯೋತ್ಪಾದಕರ ಗುಂಡಿನ ದಾಳಿಗೆ ಭಾರತೀಯ ವಾಯುಪಡೆಯ 6 ಸಿಬ್ಬಂದಿ ಗಾಯಗೊಂಡಿದ್ದರು. ಅವರು ಎರಡು ವಾಹನಗಳಲ್ಲಿ ಪ್ರಯಾಣಿಸುತ್ತಿದ್ದರು. ಕಳೆದ ವರ್ಷ ಸೇನೆಯ ಮೇಲೆ ಸರಣಿ ಭಯೋತ್ಪಾದಕ ದಾಳಿಗೆ ಸಾಕ್ಷಿಯಾಗಿದ್ದ ಈ ಪ್ರದೇಶದಲ್ಲಿ ಈ ವರ್ಷ ಸಶಸ್ತ್ರ ಪಡೆಗಳ ಮೇಲೆ ನಡೆದ ಮೊದಲ ದೊಡ್ಡ ದಾಳಿ ಇದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net