ಕಾಶ್ಮೀರದಲ್ಲಿ ಇಬ್ಬರು ಉಗ್ರರ ಸಂಹಾರ

Indian Army
Published on

ಜಮ್ಮು ಮತ್ತು ಕಾಶ್ಮೀರ: ಭಾರತೀಯ ಸೇನಾಪಡೆ ಹಾಗೂ ಉಗ್ರರ ನಡುವೆ ಪಶ್ಚಿಮ ಕಾಶ್ಮೀರದ ಅನಂತನಾಗ ಜಿಲ್ಲೆಯ ತಾಂಗ್​ಪಾವಾ ಹಳ್ಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಭಾನುವಾರ ಅಧಿಕಾರಿಗಳು ಮಾಹಿತಿ ನೀಡಿದರು.

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್ ಯೋಧರ ತಂಡ ತಕ್ಷಣ ಕಾರ್ಡನ್ ಮತ್ತು ಸರ್ಚ್ ಆಪರೇಷನ್ (ಸಿಎಎಸ್‌ಒ) ಪ್ರಾರಂಭಿಸಿತ್ತು. ರಕ್ಷಣಾ ಪಡೆಗಳು ಶಂಕಿತ ಪ್ರದೇಶದಲ್ಲಿ ಹುಡುಕಾಟವನ್ನು ತೀವ್ರಗೊಳಿಸಿದರು. ಆಗ ಪಾರಾಗಲು ಉಗ್ರರು ಗುಂಡಿನ ದಾಳಿಯನ್ನು ಪ್ರಾರಂಭಿಸಿದರು. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಕಳೆದವಾರ ಎರಡು ಬೇರೆ ಬೇರೆ ಎನ್ಕೌಂಟರ್​ಗಳಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರದ ಪೊಲೀಸ್ ಪಡೆಗಳ ಜಂಟಿ ಕಾರ್ಯಚರಣೆಯಲ್ಲಿ ಸೋಫಿಯಾನ್​ ಜಿಲ್ಲೆಯಲ್ಲಿ ಈ ಘಟನೆ ನಡೆದಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net