ಬಿಜೆಪಿ ಯುವ ಮುಖಂಡನ ನಿರ್ಲಕ್ಷ್ಯಕ್ಕೆ ಇಬ್ಬರು ಮಹಿಳೆಯರು ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Accident25 May 20
Published on

ಬೆಳಗಾವಿ: ಬಿಜೆಪಿ ಯುವ ಮುಖಂಡನೋರ್ವನ ನಿರ್ಲಕ್ಷ್ಯಕ್ಕೆ ಇಬ್ಬರು ಮಹಿಳೆಯರು ಜೀವವನ್ನೇ ಕಳೆದುಕೊಂಡಿದ್ದು, ಇನ್ನೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ನಿನ್ನೆ ರಾತ್ರಿ ಊಟ ಮುಗಿಸಿ ವಾಕಿಂಗ್​ ತೆರಳುತ್ತಿದ್ದ ಮಹಿಳೆಯರ ಮೇಲೆ ಬೆಳಗಾವಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಮಾಜಿ ಅಧ್ಯಕ್ಷ ಯುವರಾಜ್​ ಜಾಧವ್​ ಕಾರು ಹರಿಸಿದ್ದಾರೆ. ಸವಿತಾ ಪಾಟೀಲ್ (44), ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಮಹಿಳೆ ಶಾಂತಾ ಚೌಗುಲೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುತಗಾ ಗ್ರಾಮದ ಬಳಿ ನಿನ್ನೆ ರಾತ್ರಿ ದುರ್ಘಟನೆ ನಡೆದಿದ್ದು, ಅಡ್ಡಾದಿಡ್ಡಿ ಕಾರು ಚಲಾಯಿಸಿ, ಅಪಘಾತ ಮಾಡಿದ ಯುವರಾಜ್​ ಜಾಧವ್​ನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net