

ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಮಳೆಯ ಹೊಡೆತಕ್ಕೆ ವಾಣಿಜ್ಯ ನಗರಿಯ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸ್ಥಳೀಯ ರೈಲುಗಳ ಸಂಚಾರಕ್ಕೂ ಅಡ್ಡಿ ಆತಂಕ ಎದುರಾದ್ದು, ಹಲವು ರೈಲುಗಳ ಸಂಚಾರವನ್ನು ನಿಲ್ಲಿಸಲಾಗಿದೆ. ಮತ್ತೆ ಕೆಲವು ರೈಲುಗಳು ನಿಧಾನಗತಿಯಲ್ಲಿ ಚಲಿಸುವಂತೆ ಮಾಡಲಾಗಿದೆ.
ಕಳೆದ 24 ಗಂಟೆಗಳಲ್ಲಿ ನಗರದ ಹಲವು ಪ್ರದೇಶಗಳಲ್ಲಿ 20 ಸೆಂ.ಮೀ ಮಳೆಯಾಗಿದ್ದು. ಮುಂಬೈನ ಹಲವು ಸ್ಥಳಗಳಲ್ಲಿ ಭಾರಿ ಮಳೆಯಾಗಿದ್ದು, ಇಂದು ಬೆಳಗ್ಗೆ ಬೆಳಗ್ಗೆ 8 ಗಂಟೆಯವರೆಗೆ ಮಳೆ ಪ್ರಮಾಣ ಹೆಚ್ಚಾಗಿತ್ತು. ಭಾರೀ ಮಳೆಯಿಂದ ರೈಲು ಸಂಚಾರದಲ್ಲೂ ವ್ಯತ್ಯವಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈ ಹಾಗೂ ಸುತ್ತಮುತ್ತಲಿನ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಪ್ರದೇಶಗಳಲ್ಲಿ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಮೂರು ತಂಡಗಳನ್ನು ಮುಂಬೈನಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಲಬಾರ್ ಮತ್ತು ಮುಲುಂಡ್ ಬೆಟ್ಟದಲ್ಲಿ ಬೆಳಿಗ್ಗೆ 6 ರಿಂದ 7 ರ ನಡುವೆ 3.4 ಸೆಂ.ಮೀ ಮಳೆ ದಾಖಲಾಗಿದೆ. ಭಾಂಡಪ್ 2.9 ಸೆಂ.ಮೀ, ಪೂರ್ವ ವಡಾಲಾದಲ್ಲಿ 2.4 ಸೆಂ.ಮೀ, ಮತ್ತು ವರ್ಸೋವಾದಲ್ಲಿ 2 ಸೆಂ.ಮೀ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಸ್ಥಳೀಯ ರೈಲು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಪಶ್ಚಿಮ ರೈಲ್ವೆ ಇಲಾಖೆ ತಿಳಿಸಿದೆ.