

ನವದೆಹಲಿ: ಮೆಕ್ಕಾಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಸೇತುವೆಗೆ ಡಿಕ್ಕಿ ಹೊಡೆದು, ಉರುಳಿಬಿದ್ದು ಬೆಂಕಿ ಹೊತ್ತಿಕೊಂಡಿದೆ. ಬಸ್‌ನಲ್ಲಿ ಬ್ರೇಕ್ ಸಮಸ್ಯೆಯಿಂದ ಈ ಅಪಘಾತ ಸಂಭವಿಸಿ ಸಾವು,ನೋವು ಸಂಭವಿಸಿದೆ.
ಈ ಅಪಘಾತದಲ್ಲಿ ಕನಿಷ್ಠ 20 ಜನರು ಮೃತಪಟ್ಟಿದ್ದಾರೆ ಮತ್ತು ಸುಮಾರು 29 ಜನರು ಗಾಯಗೊಂಡಿದ್ದಾರೆ. ದಕ್ಷಿಣ ಪ್ರಾಂತ್ಯದ ಅಸಿರ್‌ನಲ್ಲಿ ನಡೆದ ಈ ಘಟನೆ ನಡೆದಿದೆ. ಶವಗಳ ಗುರತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೌದಿ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.
ಮೂಲಗಳ ಪ್ರಕಾರ, ಈ ಅಪಘಾತದಲ್ಲಿ ಸಾವಿನ ಸಂಖ್ಯೆ 20ಕ್ಕೆ ತಲುಪಿದೆ ಮತ್ತು ಒಟ್ಟು ಗಾಯಗಳುಗಳ ಸಂಖ್ಯೆ ಸರಿಸುಮಾರು 29 ಆಗಿದೆ. ಮೃತರು ಬೇರೆ..ಬೇರೆ ದೇಶದವರು ಎನ್ನಲಾಗಿದೆ. ಬಸ್‌ನಲ್ಲಿ ಬ್ರೇಕ್ ಸಮಸ್ಯೆಯಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.