200 ರೌಡಿಗಳ ಮನೆ ಮೇಲೆ ದಾಳಿ

police
Published on

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ವೈಟ್‌ಫೀಲ್ಡ್ ವಿಭಾಗದ ಎಂಟು ಠಾಣಾ ವ್ಯಾಪ್ತಿಗಳಲ್ಲಿ ಗುರುವಾರ ಬೆಳಗ್ಗೆ ಅಂದಾಜು ೨೦೦ ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.
ಮುಂಜಾನೆ ೪ ಗಂಟೆಯಿಂದ ಬೆಳಗ್ಗೆ ೮ ಗಂಟೆಯವರೆಗೆ ಏಕಕಾಲಕ್ಕೆ ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿ ಎಲ್ಲಾ ರೌಡಿಗಳನ್ನು ಮನೆಯಿಂದ ವೈಟ್‌ಫೀಲ್ಡ್ ಗ್ರೌಂಡ್ ಕರೆದೊಯ್ಯಲಾಯಿತು.
ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕದಡಬಾರದು. ರೌಡಿ ಚಟುವಟಿಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾನೂನು ಉಲ್ಲಂಘಿಸಿದರೆ ಗಡಿಪಾರು ಮಾಡುವುದಾಗಿ ಡಿಸಿಪಿ ಶಿವಕುಮಾರ್ ಅವರು ರೌಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ರೌಡಿಗಳ ಮೊಬೈಲ್ ನಂಬರ್, ಉದ್ಯೋಗದ ಬಗ್ಗೆ ಮಾಹಿತಿ ಪಡೆದುಕೊಂಡು ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಯಾವುದೇ ರೀತಿಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಡಿಸಿಪಿ ಅವರು ತಾಕೀತು ಮಾಡಿದ್ದಾರೆ.
ಈಗಾಗಲೇ ಪೂರ್ವ, ಉತ್ತರ, ದಕ್ಷಿಣ ಹಾಗೂ ಕೇಂದ್ರ ವಿಭಾಗದ ಪೊಲೀಸರು ಆಯಾ ವ್ಯಾಪ್ತಿಗಳಲ್ಲಿನ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net