ಭದ್ರಾ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

bhadra dam water release
Published on

ಶಿವಮೊಗ್ಗ: ಭದ್ರಾ ಜಲಾಶಯಕ್ಕೆ ಭಾರಿ ಪ್ರಮಾಣದ ಒಳಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಜಲಾಶಯದ 4 ಕ್ರಸ್ಟ್‌ಗೇಟ್ ಮೂಲಕ ನದಿಗೆ 2 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಯಿತು.

186 ಅಡಿ ಗರಿಷ್ಠ ಮಟ್ಟದ ಜಲಾಶಯಲ್ಲಿ ಪ್ರಸ್ತುತ 174.4 ಅಡಿ ನೀರಿದೆ. ಎಡದಂಡೆ ಕಾಲುವೆ ಗೇಟ್ ದುರಸ್ತಿ ಕಾರಣಕ್ಕೆ ಕಾಲುವೆಗಳಿಗೆ ನೀರು ಹರಿಸಲು ಸಾಧ್ಯವಿಲ್ಲ. ಅಲ್ಲದೆ, ಜುಲೈನಲ್ಲಿ ಮಳೆ ಹೆಚ್ಚಿರುವ ಕಾರಣ ಯಾವುದೇ ಸಮಯದಲ್ಲಿ ಜಲಾಶಯ ಗರಿಷ್ಠ ಮಟ್ಟಕ್ಕೆ ತಲುಪುವ ಸಾಧ್ಯತೆ ಇದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ನೀರನ್ನು ಹೊರ ಬಿಡಲಾಗುತ್ತಿದೆ. ಈಗಾಗಲೇ ವಿದ್ಯುತ್ ಉತ್ಪಾದನಾ ಘಟಕದ ಮೂಲಕ 2 ಸಾವಿರ, ರಿವರ್ ಸ್ಟೈಸ್ ಮೂಲಕ 200 ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net