ಲೋಕಸಭಾ ಚುನಾವಣೆ ಫಲಿತಾಂಶ 2024: ಹೇಗಿರಲಿದೆ ಮತಎಣಿಕೆ ಪ್ರಕ್ರಿಯೆ? 8,360 ಅಭ್ಯರ್ಥಿಗಳ ಭವಿಷ್ಯ ಇಂದೇ ನಿರ್ಧಾರ!

Untitled design (36)
Published on

ನವದೆಹಲಿ: ಜೂ.4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಅಧಿಕೃತವಾಗಿ ಹೊರಬೀಳಲಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ದೇಶವ್ಯಾಪಿ ಏಳು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಕಣದಲ್ಲಿರುವ 8 ಸಾವಿರ ಅಭ್ಯರ್ಥಿಗಳ ಭವಿಷ್ಯ ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಿ ತಿಳಿಯಲಿದೆ.

ಬೆಳಗ್ಗೆ 8ರಿಂದಲೇ ಅಂಚೆ ಮತಎಣಿಕೆ ಪ್ರಾರಂಭವಾಗಲಿದ್ದು, ಇದಾದ 30 ನಿಮಿಷಗಳ ಬಳಿಕ ಇವಿಎಂ ಮತ ಎಣಿಕೆ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ. ಇನ್ನು ಇತ್ತೀಚೆಗಷ್ಟೇ ಹೊರಬಿದ್ದ ಚುನಾವಣೋತ್ತರ ಸಮೀಕ್ಷಾ ವರದಿ ದೇಶದಲ್ಲಿ ಬಿಜೆಪಿ 300ಕ್ಕೂ ಅಧಿಕ ಸೀಟ್​ಗಳನ್ನು ಗೆಲ್ಲಲಿದೆ ಎಂದು ತಿಳಿಸಿತ್ತು. ಈ ಬೆನ್ನಲ್ಲೇ ಬಿಜೆಪಿ ನಾಯಕರು ಈಗಾಗಲೇ ಪಕ್ಷದ ಪ್ರಧಾನ ಕಛೇರಿಯಲ್ಲಿ ಸಂಭ್ರಮಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಫಲಿತಾಂಶ ಪ್ರಕಟಕ್ಕೂ ಮುನ್ನವೇ ಭಾರೀ ಪ್ರಮಾಣದ ಸಿಹಿ ತಿಂಡಿಗಳನ್ನು ತಯಾರಿಸಿರುವ ಬಿಜೆಪಿ, ಸಂಭ್ರಮಕ್ಕಾಗಿ ಕಾತರದಿಂದ ಕಾಯುತ್ತಿದೆ. ಇದೇ ರೀತಿ ಕಾಂಗ್ರೆಸ್​ ನಾಯಕರು ಕೂಡ ತಮ್ಮ ಪ್ರಧಾನ ಕಛೇರಿಗಳಲ್ಲಿ ಸಿಹಿ ತಯಾರಿಕೆ ಮಾಡಿಸಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಒಟ್ಟಾರೆ ಯಾರಿಗೆ ಸಿಗಲಿದೆ ಅಧಿಕಾರದ ಚುಕ್ಕಾಣಿ ಎಂಬುದನ್ನು ಸದ್ಯ ಕಾದು ನೋಡಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net