ತೃಣಮೂಲ ಕಾಂಗ್ರೆಸ್​ ಏಕಾಂಗಿ ಸ್ಪರ್ಧೆ: ಕಾಂಗ್ರೆಸ್​ ನಾಯಕಿ ದೀಪಾ ದಾಸ್​ ಹೇಳಿದ್ದೇನು?

ದೀಪಾ ದಾಸ್​
Published on

ತೆಲಂಗಾಣ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿರುವ ಬಗ್ಗೆ ತೆಲಂಗಾಣ ಎಐಸಿಸಿ ಉಸ್ತುವಾರಿ ದೀಪಾ ದಾಸ್ ಮುನ್ಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳುವ ಮೂಲಕ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ. ಇದರ ಬಗ್ಗೆ ನಮಗೆ ಈಗಾಗಲೇ ಮಾಹಿತಿ ಬಂದಿದೆ ಎಂದರು.

ಮಮತಾ ಅವರು ಬಿಜೆಪಿಯವರ ಬಗ್ಗೆ ಮೃದು ಧೋರಣೆ ಹೊಂದಿರುವುದನ್ನು ಸಾಬೀತುಪಡಿಸಿದ್ದಾರೆ. ಅವರು ಇಷ್ಟು ದಿನ ‘INDIA’ ಮೈತ್ರಿಕೂಟದಲ್ಲಿದ್ದರು. ಈಗ ತಮ್ಮ ಅಭಿಪ್ರಾಯವನ್ನು ಬದಲಾಯಿಸಿದ್ದು, ಬಿಜೆಪಿಯೊಂದಿಗೆ ಕೈಜೋಡಿಸುತ್ತಿದ್ದಾರೆ. ಬಂಗಾಳದಲ್ಲಿ ಬಿಜೆಪಿಯವರಿಗೆ ಸಹಾಯ ಮಾಡುತ್ತಾರೆ ಎಂಬುದು ಸಾಬೀತಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net