2025ರ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಪಟ್ಟದ ಸಾಂಸ್ಕೃತಿಕ ಸ್ಪರ್ಧೆ ಮತ್ತು ಕ್ರೀಡಾ ಸ್ಪರ್ಧೆ

YLP DRAMA
Published on

ಸೆಪ್ಟೆಂಬರ್ 11 ರಂದು ಬೆಳಿಗ್ಗೆ 10 ಗಂಟೆಯಿAದ ಗ್ರೀನ್ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ, ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ, ನಿಮಷಾಂಭ ನಗರ ಮೈಸೂರು ಇಲ್ಲಿ ಸಾಂಸ್ಕೃತಿಕ ಸ್ಪರ್ಧೆಯನ್ನು ಹಾಗೂ ಸೆಪ್ಟೆಂಬರ್ 13 ರಂದು ಬೆಳಿಗ್ಗೆ: 10 ಗಂಟೆಯಿoದ ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್ ಬಾದ್, ಮೈಸೊರು ಇಲ್ಲಿ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

 ಸಾಂಸ್ಕತಿಕ ಸ್ಪರ್ಧೆಗಳು: ಗಾಯನ ಸ್ಪರ್ಧೆ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆಯಲ್ಲಿ ಮಹಿಳೆಯರು /ಪುರುಷರು ಭಾಗವಹಿಸಬಹುದಾಗಿದ್ದು, 60 ರಿಂದ 69 ವರ್ಷ, 70 ವರ್ಷ ಹಾಗೂ ಮೇಲ್ಪಟ್ಟವರಾಗಿರಬೇಕು.

 ಕ್ರೀಡಾ ಸ್ಪರ್ಧೆಗಳು: ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು ಸ್ಪರ್ಧೆಯಲ್ಲಿ ಮಹಿಳೆಯರು /ಪುರುಷರು ಭಾಗವಹಿಸಬಹುದಾಗಿದ್ದು, 60 ರಿಂದ 69 ವರ್ಷ, 70 ವರ್ಷ ಹಾಗೂ ಮೇಲ್ಪಟ್ಟವರಾಗಿರಬೇಕು.

 ಆಸಕ್ತ ಹಿರಿಯ ನಾಗರಿಕರು ಸಾಂಸ್ಕೃತಿಕ ಸ್ಪರ್ಧೆಗಳಿಗಾಗಿ ತಮ್ಮ ವಯಸ್ಸಿನ ಮಾಹಿತಿಯೊಂದಿಗೆ ಸೆಪ್ಟೆಂಬರ್ 10 ರಂದು ಸಂಜೆ 05 ರೊಳಗಾಗಿ ತಮ್ಮ ಹೆಸರನ್ನು ಖುದ್ದಾಗಿ ಅಥವಾ ದೂ.ಸಂ: 0821-2490333, ಪ್ರಭುಸ್ವಾಮಿ-7892178089 ಮೂಲಕ ನೊಂದಾಯಿಸಿಕೊಳ್ಳಬಹುದಾಗಿದೆ. ಹಾಗೂ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಗಳಿಗಾಗಿ ಸೆಪ್ಟೆಂಬರ್ 10 ರಂದು ಸಂಜೆ 05 ರೊಳಗಾಗಿ ತಮ್ಮ ಹೆಸರನ್ನು ಖುದ್ದಾಗಿ ಅಥವಾ ದೂ.ಸಂ:0821-2490333, ಮಂಜುನಾಥ್-9742434753 ಮೂಲಕ ನೊಂದಾಯಿಸಿಕೊಳ್ಳಬಹುದಾಗಿದೆ. ಕಡ್ಡಾಯವಾಗಿ ಸ್ಪರ್ಧೆಯ ದಿನದಂದು ವಯಸ್ಸಿನ ದೃಢೀಕರಣವನ್ನು ಸಲ್ಲಿಸಬೇಕು.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ. ಪುಲಿಕೇಶಿ ರಸ್ತೆ, ತಿಲಕ್ ನಗರ, ಮೈಸೂರು ದೂರವಾಣಿ ಸಂಖ್ಯೆ: 0821-2490333 ನ್ನು ಸಂಪರ್ಕಿಸಬಹುದಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net