ಮೊದಲ ದಿನವೇ 204 ವಿದ್ಯಾರ್ಥಿಗಳ ಗೈರು

sslc exam
ಶಿವಮೊಗ್ಗ ದುರ್ಗಿಗುಡಿ ಶಾಲೆಯಲ್ಲಿ ಪರೀಕ್ಷಾ ಕೇಂದ್ರದೊಳಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತೆರಳುತ್ತಿರುವುದು.
Published on

ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ದಿನ ಪ್ರಥಮ ಭಾಷೆಗೆ 204 ವಿದ್ಯಾರ್ಥಿಗಳು ಗೈರಾಗಿದ್ದರು.

22,044 ರೆಗ್ಯುಲರ್ ವಿದ್ಯಾರ್ಥಿಗಳು, 1,430 ಪುನರಾವರ್ತಿತ, 384 ಖಾಸಗಿ ಮತ್ತು 144 ಖಾಸಗಿ ಪುನರಾವರ್ತಿತ ಸೇರಿ 24,002 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 55 ರಿಪೀಟರ್ಸ್‌ ಮತ್ತು 149 ರೆಗ್ಯುಲರ್ ವಿದ್ಯಾರ್ಥಿಗಳು ಪ್ರಥಮ ಭಾಷೆ ಪರೀಕ್ಷೆಯಿಂದ ಹೊರಗುಳಿದರು.
ಜಿಲ್ಲೆಯ 78 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಯಿತು. ಯಾವುದೇ ಅಕ್ರಮಗಳಿಲ್ಲದೆ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಅಲ್ಲದೆ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿತ್ತು.
ಬೆಳಗ್ಗೆ 9ರಿಂದಲೇ ಪಾಲಕರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಗಳಿಗೆ ವಾಹನಗಳಲ್ಲಿ ಕರೆತಂದು ಬಿಡುತ್ತಿದ್ದರು. ಕೆಲ ವಿದ್ಯಾರ್ಥಿಗಳು ಆತಂಕದಿಂದಲೇ ಕೇಂದ್ರಗಳಿಗೆ ತೆರಳಿದರು. ಮತ್ತೆ ಕೆಲವರು ಪರೀಕ್ಷಾ ಕೇಂದ್ರಗಳಿಗೆ ಹೋಗುವವರೆಗೂ ಓದಿದ್ದನ್ನು ಪುನರ್ಮನನ ಮಾಡಿಕೊಂಡರು. ಪಾಲಕರು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net